ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಮಹಿಳಾ ಅಭ್ಯರ್ಥಿಗಳಿಗೆ ಜುಲೈ 20 ರಿಂದ ಜುಲೈ 30 ರವರೆಗೆ ನಗರದ ಕೊಟ್ಟಾರ ಭಾರತಿ ಟ್ರೈನಿಂಗ್ ಸೆಂಟರ್‍ನಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಉದ್ಯಮಶೀಲರ ಗುಣಲಕ್ಷಣಗಳು/ ಸಾಮಥ್ರ್ಯಗಳು, ಉದ್ಯಮಶೀಲತೆಯ ಅಭಿವೃದ್ಧಿಗೆ ಅವಶ್ಯವಿರುವ ಸಾಧನಾ ಪ್ರೇರಣಾ ತರಬೇತಿ, ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಹಂತಗಳು, ಉದ್ಯಮ ಅವಕಾಶಗಳನ್ನು ಗುರುತಿಸುವುದು, ಉದ್ಯಮ ಆಯ್ಕೆಯ ವಿಧಾನ, ಹಣಕಾಸು ನಿರ್ವಹಣೆ, ಮಾರುಕಟ್ಟೆ ನಿರ್ವಹಣೆ, ಲೆಕ್ಕಪತ್ರ ನಿರ್ವಹಣೆ, ಸಣ್ಣ ಉದ್ಯಮ ನಿರ್ವಹಣೆ , ಸರ್ಕಾರದ ಸ್ವಯಂ ಉದ್ಯಮ ಯೋಜನೆಗಳು, ಯೋಜನಾ ವರದಿ ತಯಾರಿಕೆ ಬ್ಯಾಂಕ್‍ಗಳ ಪಾತ್ರ ಇತ್ಯಾದಿ ವಿಷಯಗಳ ಬಗ್ಗೆ ಪರಿಣಿತ ಅತಿಥಿ ಬೋಧಕರಿಂದ ಉಪನ್ಯಾಸಗಳನ್ನು ಏರ್ಪಡಿಸಿ ಯಶಸ್ವಿ ಉದ್ಯಮಶೀಲರೊಂದಿಗೆ ಚರ್ಚಿಸುವ ಅವಕಾಶ ನೀಡಲಾಗುತ್ತದೆ. ತರಬೇತಿ ಮುಗಿದ ನಂತರ ಉದ್ಯಮ ಪ್ರಾರಂಭಿಸಲು ಬೆಂಬಲಸೇವೆ ಒದಗಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ 18 ರಿಂದ 45 ವರ್ಷ ವಯೋಮಿತಿಯ, 10ನೇ ತರಗತಿ ಪಾಸಾದ ಎಲ್ಲಾ ಜಾತಿಯ ಮಹಿಳಾ ಸ್ವ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬಹುದು.
ಅರ್ಜಿ ಸಲ್ಲಿಸಲು ಬಯಸುವವರು ನಗರದ ಉರ್ವ ಮಾರ್ಕೆಟ್ ಕಟ್ಟಡದ 2 ನೇ ಮಹಡಿಯಲ್ಲಿರುವ ಸಿಡಾಕ್ ಉಪ ನಿರ್ದೇಶಕರ ಕಛೇರಿ (ದೂ.ಸಂ: 9448812974, 9886035251, 8546894517 ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿಯ ಜೊತೆಗೆ 3 ಪಾಸ್‍ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್‍ನ ಪ್ರತಿಯನ್ನು ಕಛೇರಿಗೆ ಸಲ್ಲಿಸಬೇಕು ಎಂದು ಸಿಡಾಕ್ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


