21.9 C
Karnataka
Thursday, November 28, 2024

ಹಿಂದುಳಿದ ವರ್ಗಗಳ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಂಗಳೂರು: ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ), ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ”), ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ವೆಬ್‍ಸೈಟ್ ವಿಳಾಸ: ssp.postmatric.karnataka.gov.in/ ಇನ್ನಿತರ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ ವಿಳಾಸ    bcwd.karnataka.gov.in ಹಾಗೂ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ ಇಮೇಲ್:bcwdhelpline@gmail.com,, ಸಂಪರ್ಕಿಸಬಹುದು. ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ 1902, ಇ-ಮೇಲ್ ವಿಳಾಸ postmatrichelp@karnataka.gov.in ಸಂಪರ್ಕಿಸುವಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles