19.4 C
Karnataka
Monday, March 3, 2025

ಫೆ.8: “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ

ಮಂಗಳೂರು: “ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8ರಂದು ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದ್ದು ರಾತ್ರಿ 8:30ರವರೆಗೆ ಕಾರ್ಯಕ್ರಮ ನಡೆಯಲಿದೆ” ಎಂದು ಕಲಾಸಾಧನ ಸಂಸ್ಥೆಯ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ಅವರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ಮಾತನಾಡಿ ಬೆಳಗ್ಗೆ 8 ಗಂಟೆಗೆ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದೆ. ಬೆಳಿಗ್ಗೆ 8.40 ರಿಂದ 9.30 ರವರೆಗೆ, ವಿಭಾ ಎಸ್ ನಾಯಕ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ. ತಬಲಾ ದಲ್ಲಿ ವಿಗ್ನೇಶ್ ಪ್ರಭು ಹಾಗೂ ಹಾರ್ಮೋನಿಯಂ ನಲ್ಲಿ ಹೇಮಂತ್ ಭಾಗವತ್ ಸಾಥ್ ನೀಡಲಿದ್ದಾರೆ.ಬೆಳಿಗ್ಗೆ 9.40 ರಿಂದ 10.30 ರವರೆಗೆ ಮೂಡುಬಿದಿರೆಯ ಸ್ವಯಂ ಪ್ರಕಾಶ್ ಪ್ರಭು (ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಅವರ ಶಿಷ್ಯ) ಅವರಿಂದ ಕೊಳಲು ವಾದನ, ಬೆಳಿಗ್ಗೆ 10.40 ರಿಂದ 11.30 ರವರೆಗೆ ಆತ್ರೇಯಾ ಗಂಗಾಧರ್ ಅವರಿಂದ ಗಾಯನ ನಡೆಯಲಿದೆ. ಮಂಗಳೂರಿನ ಸುರತ್ಕಲ್ ಮೂಲದ ಆತ್ರೇಯ ಗಂಗಾಧರ್ ಅವರು ಪುಣೆಯ ಚಿನ್ಮಯ ವಿಶ್ವವಿದ್ಯಾಪೀಠದಲ್ಲಿ ಸಂಗೀತದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರುವ ಗಾಯಕರು ಎ೦ದು ವಿವರಿಸಿದರು.

ಬೆಳಗ್ಗೆ 11.40 ರಿಂದ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ.ಸಂಜೆ 5.00 ಹಿಂದೂಸ್ತಾನಿ ಸಂಗೀತ ಕಛೇರಿ ಉದ್ಘಾಟನೆ. ಸಂಜೆ 5.45 ರಿಂದ 7.00 ವರೆಗೆ ಬಸವರಾಜ ವಂದಲಿ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ..7.15 ರಿಂದ 8.30ವರೆಗೆ ಕೋಲ್ಕತ್ತಾದ ಅರಣ್ಯ ಚೌಧರಿ ಅವರಿಂದ ಸಂತೂರ್ ವಾದನ ಕಛೇರಿ ನಡೆಯಲಿದೆ ಅವರು ಮುಂಬೈ, ಬನಾರಸ್, ದೆಹಲಿ ಹಾಗೂ ಜರ್ಮನಿ, ಫ್ರಾನ್ಸ್, ಪೋಲೆಂಡ್ ಮುಂತಾದ ವಿದೇಶಗಳಲ್ಲಿಯೂ ಪ್ರದರ್ಶನ ನೀಡಿರುವ ಖ್ಯಾತ ಸಂತೂರ್ ವಾದಕರಾಗಿದ್ದಾರೆ ಎಂದವರು ಹೇಳಿದರು.ಮಂಗಳೂರಿನ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂಗೀತ ಕಾರ್ಯಕ್ರಮದಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.
ಪತ್ರಿಕಾಗೋಷ್ಠಿ ಯಲ್ಲಿ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಪ್ರಿನ್ಸಿಪಾಲ್ ಡಾ ಮಾಲಿನಿ ಹೆಬ್ಬಾರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles