ಮ೦ಗಳೂರು: ಉಪ ಲೋಕಾಯುಕ್ತ ನ್ಯಾ. ಬಿ. ವೀರಪ್ಪ ಅವರನ್ನು ಮಂಗಳೂರು ವಕೀಲರ ಸಂಘದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಬಿ. ವೀರಪ್ಪ ಅವರನ್ನು ಗೌರವಿಸಲಾಯಿತು.
ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಸಾರ್ವಜನಿಕ ಆಡಳಿತದಲ್ಲಿ ವಕೀಲರ ಪಾತ್ರ” ಬಗ್ಗೆ ಉಪನ್ಯಾಸ ಮತ್ತು ವಕೀಲರ ಜೊತೆಗೆ ಸಂವಾದ ನಡೆಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ, ವಕೀಲರ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ, ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಕಾರ್ಯದರ್ಶಿ ಶೋಭಾ ಬಿ.ಜಿ., ಲೋಕಾಯುಕ್ತ ಎಸ್ಪಿ. ನಟರಾಜ್ ಮೊದಲಾದವರು ಉಪಸ್ಥಿತರಿದ್ದರು.