ಮಂಗಳೂರು:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ.50ರಷ್ಟು ಅಥವಾ ಗರಿಷ್ಟ ರೂ.15 ಲಕ್ಷ ಸಹಾಯಧನ (ಕೇಂದ್ರ ಸರ್ಕಾರದ ರೂ.6 ಲಕ್ಷ ಹಾಗೂ ರಾಜ್ಯ ಸರ್ಕಾರದ ವತಿಯಿಂದ ರೂ.9 ಲಕ್ಷ ಸಹಾಯಧನ ನೀಡಿಕೆ) ವೈಯುಕ್ತಿಕ ಕಿರು ಊದ್ದಿಮೆಗಳಿಗೆ ಹಾಗೂ ರೈತ ಉತ್ಪಾದಕ ಸಂಸ್ಥೆಗಳು /ಉತ್ಪಾದಕ ಸೊಸೈಟಿಗಳಿಗೆ ಸಹಾಯಧನ- ಪ್ರತಿ ಘಟಕಕ್ಕೆ ಶೇ.35ರಷ್ಟು (ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುಪಾತ 60:40) ಮೌಲ್ಯದ ಸಾಲ ಸಂಪರ್ಕವಿರುವ ಸಹಾಯಧನ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಶೇ.15ರಷ್ಟು (ಗರಿಷ್ಟ ರೂ.5 ಲಕ್ಷ) ಹೆಚ್ಚುವರಿ ಸಹಾಯಧನ, ಅಲ್ಲದೆ ಸ್ವಸಹಾಯ ಸಂಘಗಳ ಸದಸ್ಯರಿಗೆ ಕಾರ್ಯನಿರ್ವಹಣಾ ಬಂಡವಾಳ ಹಾಗೂ ಚಿಕ್ಕ ಸಲಕರಣೆಗಳನ್ನು ಖರೀದಿಸಲು ರೂ. 40000 ಪ್ರಾಥಮಿಕ ಬಂಡವಾಳ ನೀಡಿಕೆ ಈ ಯೋಜನೆಯಲ್ಲಿ ಲಭ್ಯವಿದೆ.
ಜಿಲ್ಲೆಯ ಎಲ್ಲಾ ರೈತರು/ ಉದ್ದಿಮೆದಾರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


