ಮ೦ಗಳೂರು: ನಾಪತ್ತೆಯಾಗಿದ್ದ ಸುರತ್ಕಲ್ನ ಖಾಸಗಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿಯ ಕೊಪ್ಪಳ ಡ್ಯಾಂ ಬಳಿ ನದಿಯಲ್ಲಿ ಪತ್ತೆಯಾಗಿದೆ.
ಮೃತ ಮಕ್ಕಳನ್ನು ಯಶ್ಚಿತ್(15), ರಾಘವೇಂದ್ರ(15), ನಿರೂಪ(15), ಅನ್ವಿತ್(15) ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿಗಳು ಸುರತ್ಕಲ್ನ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಮಂಗಳವಾರ ಎಸ್.ಎಸ್.ಎಲ್ ಸಿ ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆ ಬರೆದಿದ್ದರು. ಬಳಿಕ ಶಾಲೆಯಿ೦ದ 1:30ರ ವೇಳೆಗೆ ತೆರಳಿದ್ದ ವಿದ್ಯಾರ್ಥಿಗಳು ಕಾಣೆಯಾಗಿದ್ದು ಸುರತ್ಕ ಲ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾರ್ಯಾಚರಣೆಗೆ ಇಳಿದಿದ್ದ ಸುರತ್ಕಲ್ ಠಾಣಾ ಪೊಲೀಸರು, ಶಾಲೆ ಮತ್ತು ಬಸ್ ನಿಲ್ದಾಣದ ಬಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊ೦ಡು ಪರಿಶೀಲನೆ ನಡೆಸಿದ್ದು ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಹಳೆಯಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಇಳಿದಿರುವುದನ್ನು ಪತ್ತೆಯಾಗಿತ್ತು.
ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್ ಟವರ್ ಲೋಕೇಶನ್ ಆಧರಿಸಿ ವಿದ್ಯಾರ್ಥಿಗಳು ನ೦ದಿನಿ ನದಿಯ ದಡಕ್ಕೆ ತೆರಳಿರುವುದನ್ನು ಖಚಿತ ಪಡಿಸಿಕೊಂಡು ಪೊಲೀಸರು, ಸ್ಥ ಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ. ನದಿಯಲ್ಲಿ ಕಾರ್ಯಾಚರಣೆ ನಡೆಸಿದಾಗ ಮೃತದೇಹಗಳು ಪತ್ತೆಯಾಗಿದೆ. ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತದೇಹ ಗಳ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.