25.8 C
Karnataka
Friday, April 4, 2025

ಉಚಿತ ಹೊಲಿಗೆ ಯಂತ್ರ ವಿತರಣೆ

ಮ೦ಗಳೂರು: ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಶಾಸಕ ವೇದವ್ಯಾಸ್ ಕಾಮತ್ ರವರು ವಿತರಿಸಿದರು.

ನಂತರ ಮಾತನಾಡಿದ ಶಾಸಕರು, ಮಹಿಳೆಯರು ಮನೆಯಲ್ಲೇ ಕುಳಿತು ಮಾಡುವ ಉದ್ಯೋಗದಲ್ಲಿ ಹೊಲಿಗೆಗೆ ಗ್ರಾಮೀಣ ಭಾಗದಿಂದ ಹಿಡಿದು ನಗರ ಭಾಗದವರೆಗೆ ಸದಾ ಬೇಡಿಕೆಯಿರುತ್ತದೆ. ಅನೇಕರ ಬಾಳಿಗೆ ಬೆಳಕಾಗಿರುವ ಈ ಹೊಲಿಗೆ ಯಂತ್ರವನ್ನು ಆರ್ಥಿಕ ಕಾರಣಗಳಿಂದಾಗಿ ಖರೀದಿಸುವ ಸಾಮರ್ಥ್ಯ ಹಲವರಿಗೆ ಇರುವುದಿಲ್ಲವಾಗಿದ್ದು ಇಂದು ಹೊಲಿಗೆ ಯಂತ್ರವನ್ನು ಪಡೆದಿರುವ ಈ ನಮ್ಮೆಲ್ಲ ಸಹೋದರಿಯರು ಸ್ವಾವಲಂಬಿಯಾಗಿ ಬದುಕು ನಡೆಸುವಂತಾಗಲಿ ಎಂದು ಹಾರೈಸುತ್ತೇನೆ ಎಂದರು.ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳ ಸಹಿತ ಅನೇಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles