17.5 C
Karnataka
Thursday, January 9, 2025

ಜ.23 ರಿಂದ ಕದ್ರಿ ಪಾರ್ಕ್‍ನಲ್ಲಿ ಫಲ ಪುಷ್ಪ ಪ್ರದರ್ಶನ

ಮಂಗಳೂರು : ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕದ್ರಿ ಉದ್ಯಾನವನದಲ್ಲಿ ಜನವರಿ 23 ರಿಂದ 26 ರವರೆಗೆ ನಡೆಯಲಿದೆ.

ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಸುಮಾರು 20 ಸಾವಿರ ಸಂಖ್ಯೆಯ ಮೂವತ್ತು ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಆಸ್ಟರ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಪೆಟೂನಿಯಾ, ಟೊರಿನೋ, ಇತ್ಯಾದಿ ಹೂವುಗಳನ್ನು ಕುಂಡಗಳಲ್ಲಿ ಬೆಳೆಯಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುತ್ತದೆ.
ಹೂವುಗಳಿಂದ ಹಾಗೂ ಸಿರಿಧಾನ್ಯಗಳಿಂದ ವಿವಿಧ ಕಲಾಕೃತಿಯನ್ನು ತಯಾರಿಸಿ ಪ್ರದರ್ಶನದಲ್ಲಿ ಪ್ರದರ್ಶಿಸಲಾಗುತ್ತದೆ ಹಾಗೂ ಮಕ್ಕಳಿಗೆ ಮನರಂಜನೆ ನೀಡುವಂತಹ ಹೂವುಗಳಿಂದ ಅಲಂಕರಿಸಿದ ಪೆÇೀಟೋ ಪ್ರೇಮ್, ಸೆಲ್ಫೀ ಜೋನ್ ಮಾದರಿಗಳನ್ನು ನಿರ್ಮಿಸಲಾಗುವ್ಯದು.
ಜಿಲ್ಲೆಯ ಪ್ರಾಮುಖ್ಯತೆಯ ಬಗ್ಗೆ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರ ಕಲಾಕೃತಿಗಳನ್ನು ಹಣ್ಣು/ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗುತ್ತದೆ.
ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶಗಳನ್ನು ಏರ್ಪಡಿಸಲಾಗುವುದು.
ರೈತರು ಬೆಳೆದಿರುವಂತಹ ವಿಶಿಷ್ಠ ಬಗೆಯ ಹಣ್ಣು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳು, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ ಮಾರಾಟಗಾರರು ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗುತ್ತದೆ. ಸಾವಯವ ಉತ್ಪನ್ನಗಳ ಮಳಿಗೆದಾರರಿಗೆ ಆದ್ಯತೆ ನೀಡಲಾಗುತ್ತದೆ.

 ವಿವಿಧ ಮಳಿಗೆಗಳಿಗೆ ಬೃಹತ್ ಗಾತ್ರದ ನರ್ಸರಿ ಮಳಿಗೆ(60*40 ಅಡಿ) ರೂ.20,000, ಮದ್ಯಮ ಗಾತ್ರದ ನರ್ಸರಿ ಮಳಿಗೆ(30*40 ಅಡಿ) ರೂ.15,000, ಇತರೆ ಮಳಿಗೆ(20*10ಅಡಿ) ರೂ.10,000, ಪ್ರದರ್ಶನ ಮಳಿಗೆ(10*10 ಅಡಿ) ರೂ. 6,000, ಸ್ವಸಹಾಯ ಸಂಘ(10*10 ಅಡಿ) ರೂ. 2,000ದಂತೆ  ದರ ನಿಗದಿಪಡಿಸಲಾಗಿದೆ. ಮಳಿಗೆ ತೆರೆಯಲು ಆಸಕ್ತರು ತಮ್ಮ ಹೆಸರನ್ನು ಜ.18 ರ ಮುಂಚಿತವಾಗಿ ನೋಂದಾಯಿಸಬೇಕು    ಹಾಗೂ ರೈತರು ಬೆಳೆದಂತಹ ಪ್ರದರ್ಶಿಕೆಗಳನ್ನು ಜ.22 ರಂದು ಬೆಳಿಗ್ಗೆ 10.30 ಕ್ಕೆ ಕದ್ರಿ ಉದ್ಯಾನವನಕ್ಕೆ ತರಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಮಳಿಗೆಗಳಿಗೆ ಹೆಸರು ನೊಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ತೋಟಗಾರಿಕೆ ಉಪನಿರ್ದೇಶಕರ ಕಛೇರಿ ಆವರಣ  ಬೆಂದೂರು ,ಮಂಗಳೂರು (ದೂರವಾಣಿ ಸಂ: 9845523944, 9483110621) ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles