23.7 C
Karnataka
Friday, May 22, 2026

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ

ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ.

ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.
ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ ತುಳು ಸಿನಿಮಾ ರಂಗದಲ್ಲಿ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಕಿರಿಯರು, ಹೊಸಬರು ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಯುವ ಪ್ರತಿಭಾವಂತರು ಸಿನಿಮಾರಂಗದಲ್ಲಿ ಬೌಂಡರಿ, ಸಿಕ್ಸರ್ ಬಾರಿಸುವ ಮೂಲಕ ಚೆನ್ನಾಗಿ ಆಡಲಿ ಎಂದರು.
ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಗಜಾನನ ಕ್ರಿಕೆಟರ್ಸ್ ಸಿನಿಮಾದ ಪ್ರೀಮಿಯರ್ ಶೋಗಳನ್ನು ಪ್ರೇಕ್ಷಕರು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ನಿರ್ಮಾಪಕ ಪ್ರಜ್ವಲ್ ಶೆಟ್ಟಿ, ರೋಹನ್ ಪಿರೇರ, ಸಂತೋಷ್ ಲಾಡ್ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು. ಉದ್ಯಮಿ ಮೈಕಲ್ ಡಿ ಸೋಜ ಶುಭ ಹಾರೈಸಿದರು.
ಸಮಾರಂಭದಲ್ಲಿ ಕಲಾ ನಿರ್ದೇಶಕ ತಮ್ಮಲಕ್ಷ್ಮಣ, ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೊಗೀಶ್ ಶೆಟ್ಟಿ ಜಪ್ಪು, ತೋನ್ಸೆ ಪುಷ್ಕಳ್ ಕುಮಾರ್, ಭೋಜರಾಜ್ ವಾಮಂಜೂರು, ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಲಂಚುಲಾಲ್, ನವೀನ್ ಶೆಟ್ಟಿ ಆರ್ಯನ್, ದಯಾನಂದ ಹೆಜಮಾಡಿ, ನವೀನ್ ಶೆಟ್ಟಿ ಎಡ್ಮೆಮಾರ್, ವಿನೀತ್ ಕುನಾರ್, ನಿರ್ದೇಶಕ ಕೀರ್ತನ್ ಭಂಡಾರಿ, ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ, ಸಹನಿರ್ಮಾಪಕರಾದ ರೋಹನ್ ಪಿರೇರಾ, ಸಂತೋಷ್ ಲಾಡ್, ಶೈಲಶ್ರಿ ಮುಲ್ಕಿ, ರೂಪ ವರ್ಕಾಡಿ, ಅನ್ವಿತಾ ಸಾಗರ, ಸಮತಾ ಅಮೀನ್, ಸಂಗೀತ ನಿರ್ದೇಶಕ ಸೃಜನ್ ಕುಮಾರ್ ತೋನ್ಸೆ, ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ‌ ನಿರ್ವಹಿಸಿದರು.

ಗಜಾನನ ಕ್ರಿಜೆಟಸ್೯ ತುಳು ಸಿನಿಮಾ ಮಂಗಳೂರು, ಸುರತ್ಕಲ್, ಪಡುಬಿದ್ರೆ, ಉಡುಪಿ, ಕುಂದಾಪುರ, ಮಣಿಪಾಲ ಕಾರ್ಕಳ, ಪುತ್ತೂರು, ಬೆಳ್ತಂಗಡಿ, ದೇರಳಕಟ್ಟೆ ಮೊದಲಾದ ಕಡೆಗಳಲ್ಲಿ ಬಿಡುಗಡೆಗೊಂಡಿದೆ.
ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ.

ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನಿರ್ಮಾಪಕ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಅನ್ವಿತಾ ಸಾಗರ್, ಸಮತಾ ಅಮೀನ್, ಸರ್ವೋತ್ತಮ ಶೆಟ್ಟಿ ಅಬುದಾಭಿ, ವಾಲ್ಟರ್ ನಂದಳಿಕೆ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪುಷ್ಪರಾಜ್ ಬೊಳ್ಳಾರು, ರೂಪ ವರ್ಕಾಡಿ, ಲಂಚುಲಾಲ್, ಸಚಿನ್ ಮಾಡ, ಜೇಮ್ಸ್ ಮೆಂಡೋನ್ಸಾ, ಕರಣ್ ಪೂಜಾರಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles