17.3 C
Karnataka
Sunday, November 24, 2024

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ : ಡಿಪ್ಲೋಮಾ ಕೋರ್ಸ್ ಅರ್ಜಿ ಆಹ್ವಾನ

ಮಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್, ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್,ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್‌ಇನ್ ಫೋರ್‌ಮೇಶನ್ ಸೈನ್ಸ್ ಕೋರ್ಸ್ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ2ನೇ ವರ್ಷ, 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ 2ವರ್ಷಗಳ ಐ.ಟಿ.ಐ, ದ್ವಿತೀಯ ಪಿ.ಯು.ಸಿ(ವಿಜ್ಞಾನ, ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಆಗಸ್ಟ್ 6 ರೊಳಗೆ ಅರ್ಜಿ ಸಲ್ಲಿಸಬಹುದು.

 ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೋಂದೆಲ್, ಮಂಗಳೂರು ಇವರನ್ನು ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು ಹಾಗೂ ದೂರವಾಣಿ ಸಂಖ್ಯೆ: 0824-

2482334/ 9611320910/ 9844744845 ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles