ಮಂಗಳೂರು: ಗ್ರಾಮ ಒನ್ ಸರಕಾರದ ಮಹತ್ವಕಾಂಕ್ಷಿ ಯೋಜನೆಯದ ಸೇವಾ ಸಿಂಧು ಯೋಜನೆಯಡಿಯಲ್ಲಿ ರೂಪಿಸಲಾಗಿದ್ದು, ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅರ್ಜಿ ಸ್ವೀಕರಿಸಲಾಗುವುದು.
ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ ಯಶಸ್ವಿಯಾಗಿದ್ದು, ಸರಕಾರವು ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ರಾಮ ವನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ https://kal-mys.gramaone.karnataka.gov.in/index.php/applicant-registration-initial-step ನಲ್ಲಿ ಡಿಸೆಂಬರ್ 15ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.