ಮಂಗಳೂರು : ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುತ್ತದೆ.
ಪಿ.ಯು.ಸಿ(ವಿಜ್ಞಾನ) ಹಾಗೂ ಐ.ಟಿ.ಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ. ಈ ಎಲ್ಲಾ ಕೋರ್ಸ್‍ಗಳನ್ನು ಅಧ್ಯಯನ ಮಾಡುವಾಗ 3 ವರ್ಷದ ಡಿಪ್ಲೋಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್‍ಶಿಪ್ ತರಬೇತಿ ನೀಡಲಾಗುತ್ತದೆ. ಇದು ವಿದ್ಯಾರ್ಥಿಗಳು ಕೈಗಾರಿಕಾ ವಾತಾವರಣಕ್ಕೆ ಹೊಂದಿಕೊಳ್ಳಲು ಸುಲಭವಾಗುತ್ತದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ ರೂ.18,000 ರಿಂದ 20,000 ರೂಪಾಯಿವರೆಗೆ ಶಿಷ್ಯವೇತನ ನೀಡಲಾಗುತ್ತದೆ.
ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ವಿಪ್ರೊ ಕವಾಸಕಿ, ಇಂಡೊ ಯುಎಸ್ ಎಮ್ ಎಮ್, ಟಿ.ಸಿ.ಎಸ್, ಟೋಯೊಟಾ ಮತ್ತು ಎರೊ ಸ್ಪೆಸ್ ಮುಂತಾದ ಪ್ರತಿಷ್ಠಿತ ಬಹು ರಾಷ್ಟ್ರೀಯ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಸಂಸ್ಥೆಯ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗುತ್ತದೆ. 100% ಉದ್ಯೋಗಖಾತರಿಯನ್ನು ನೀಡಲಾಗುತ್ತದೆ ಮತ್ತು ಅಭ್ಯರ್ಥಿಗಳಿಗೆ ದೇಶÀ, ವಿದೇಶದ ವಿವಿಧ ಕೈಗಾರಿಕೆಗಳಲ್ಲಿ ಬಹಳ ಬೇಡಿಕೆ ಇದೆ.
ಹೆಚ್ಚಿನ ಮಾಹಿತಿಗೆ ನಗರದ ಬೈಕಂಪಾಡಿ, ಪ್ಲಾಟ್ ನಂ. 7ಇ, ಕೈಗಾರಿಕಾ ವಲಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸಂಪರ್ಕಿಸುವಂತೆ (ದೂ.ಸಂ : 8073208137, 7899070548, 0824-2408003) ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
