19 C
Karnataka
Monday, November 18, 2024

ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಗುರು ಪೂರ್ಣಿಮಾ ಉತ್ಸವ

ಮಂಗಳೂರು : ಗುರುಪೂರ್ಣಿಮೆಯು ವ್ಯಕ್ತಿಯೊಳಗಿನ ದೋಷಗಳನ್ನೆಲ್ಲ ಪರಿಹರಿಸಿ ಆತನನ್ನು ಸ್ವಯಂಪೂರ್ಣ ಮತ್ತು ಸರ್ವಾಂಗೀಣ ವ್ಯಕ್ತಿಯಾಗಿ ರೂಪಿಸುವ ದಿವ್ಯದಿನವಾಗಿದೆ. ಗುರು ಮತ್ತು ಗುರಿ ಎರಡೂ ಆತನನ್ನು ಗೊಂದಲರಹಿತನನ್ನಾಗಿ ಮಾಡುತ್ತದೆ ಎಂದು ಮಾತಾ ಅಮೃತಾನಂದಮಯಿ ಮಠದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ಹೇಳಿದರು.

ನಗರದ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಜುಲೈ21 ರಂದು ಗುರು ಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಮಠದ ಮುಖ್ಯಸ್ಥರಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣರವರು ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಶ್ರೀಗುರು ಪಾದುಕಾ ಪೂಜೆ, ದೇವೀಪೂಜೆ, ಸರ್ವೈಶ್ವರ್ಯ ಪೂಜೆ, ಆರತಿ, ಭಕ್ತರಿಂದ ಕ್ಷೀರಾಭಿಷೇಕ, ಪ್ರಸಾದ ವಿತರಣೆ ಹಾಗೂ ಮಹಾ ಪ್ರಸಾದ ವಿತರಣೆ ಜರುಗಿತು.

ಗುರು ಪೂರ್ಣಿಮಾ ದಿನದ ಶುಭ ಸಂದರ್ಭದಲ್ಲಿ ಭಾಗವಹಿಸಿದ ಭಕ್ತರ ಹಾಗೂ ಸಮಾಜದ ಸ್ವಾಸ್ಥ್ಯ ಸಂರಕ್ಷಣೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.ಪೂರ್ವಾಹ್ನ ಬೋಳೂರಿನ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಗುರು ಹೋಮ ಮತ್ತು ಮಹಾ ಮೃತ್ಯುಂಜಯ ಹೋಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಲಕ್ಷ್ಮಣ ಅಮೀನ್ ಮತ್ತು ಪದಾಧಿಕಾರಿಗಳು, ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಪೂರ್ವಾಧ್ಯಕ್ಷ ಡಾ. ಜೀವರಾಜ್ ಸೊರಕೆ, ಅಧ್ಯಕ್ಷ ಡಾ. ವಸಂತಕುಮಾರ ಪೆರ್ಲ, ಉಪಾಧ್ಯಕ್ಷ ಸುರೇಶ್ ಅಮೀನ್, ಕಾರ್ಯದರ್ಶಿ ಡಾ. ಕೆ. ಅಶೋಕ್ ಶೆಣೈ, ಯುವಘಟಕ ಆಯುಧ್ ನ ಪದಾಧಿಕಾರಿಗಳು, ಉಡುಪಿ – ಕುಂದಾಪುರ ಘಟಕಗಳ ಪದಾಧಿಕಾರಿಗಳು, ಸದಸ್ಯರು, ಅಮ್ಮನ ಭಕ್ತರು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles