24.5 C
Karnataka
Thursday, April 30, 2026

ಹ್ಯಾಟ್ ಹಿಲ್ : ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣ, ನಗದು ಕಳವು: ಆರೋಪಿಗಳ ಬ೦ಧನ

ಮಂಗಳೂರು: ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಅ.19 ರಂದು ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು ನಡೆದಿದೆ.

ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಾದ 20 ಗಂಟೆಗಳ ಒಳಗಾಗಿ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ, ನಗದು ಹಾಗೂ 3000 Dirham ಗಳನ್ನು ವಶಪಡಿಸಿಕೊ೦ಡಿದ್ದಾರೆ. ಅಸ್ಸಾಂ ನ ಕಾಚಾರ್ ಜಿಲ್ಲೆಯ ಮೆಹೆರ್ ಪುರ್ ನ ಅಭಿಜಿತ್ ದಾಸ್( 24 ) ಹಾಗೂ ದೇಬಾ ದಾಸ್( 21 ) ಬ೦ಧಿತ ಆರೋಪಿಗಳು.

ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಲಾಲ್ ಬಾಗ್ ಹ್ಯಾಟ್ ಹಿಲ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿರುವ 3 ಫ್ಲಾಟ್ ಗಳಿಗೆ ಅ.19 ರಂದು ರಾತ್ರಿ ಗೆ ನುಗ್ಗಿದ ಕಳ್ಳರು ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು, 5000 ರೂ ನಗದು ಹಣ, 3000 Dirham ಹಾಗೂ ಮೊಬೈಲ್ ಫೋನ್ ನ್ನು ಕಳ್ಳತನ ಮಾಡಿರುವ ಬಗ್ಗೆ ರಿಯಾಜ್ ರಶೀದ್ ಎಂಬವರು ಅ.20ರ೦ದು ದೂರು ನೀಡಿದ್ದರು. ದೂರಿನ ಮೇರೆಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಉರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿಯವರು ಹಾಗೂ ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡವು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಆರೋಪಿಗಳ ಪತ್ತೆ ಕಾಯಾ೯ಚರಣೆ ಕೈಗೊ೦ಡಿದ್ದರು. ಪ್ರಕರಣ ದಾಖಲಾಗಿ ಸುಮಾರು 20 ಗಂಟೆಗಳ ಒಳಗಾಗಿ ಈ ಮನೆಗಳ ಕಳವು ಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನು ಆ.21 ರ೦ದು ಬೆಳಗಿನ ಜಾವ ಬೆಂಗಳೂರಿನಲ್ಲಿ ಬೆಂಗಳೂರು ನಗರ ಪೊಲೀಸ್ ರವರ ಸಹಕಾರದಿಂದ ಬ೦ಧಿಸಿದರು. ಆರೋಪಿಗಳಿ೦ದ ಪ್ರಕರಣದಲ್ಲಿ ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣಗಳನ್ನು, ರೂ 5000/- ನಗದು ಹಣ, ರೂ 70,000/- ಬೆಲೆಯ 3000 Dirham ಹಾಗೂ ಮೊಬೈಲ್ ಫೋನನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ ಈ ಮೊದಲು ಬೆಂಗಳೂರು ನಗರ ಮತ್ತು ಅಸ್ಸಾಂ ಸೇರಿದಂತೆ ಹಲವು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತವೆ. ಮೇಲಾಧಿಕಾರಿಗಳ ನಿರ್ದೇಶನದಂತೆ, ಉರ್ವಾ ಪೊಲೀಸರ ತಂಡವು ಬೆಂಗಳೂರಿನಲ್ಲಿ ಸದ್ರಿ ಆರೋಪಿಗಳನ್ನು ದಿನಾಂಕ 21-10-2025 ರಂದು ಬೆಳಗ್ಗಿನ ಜಾವ ಬೆಂಗಳೂರು ನಗರ ಪೊಲೀಸ್ ರವರ ಸಹಕಾರದಿಂದ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಮುಂದಿನ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುವುದು ಮತ್ತು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು. ಈ ಕಾರ್ಯಾಚರಣೆಯನ್ನು ಡಿಸಿಪಿ ಅವರ ಮೇಲ್ವಿಚಾರಣೆಯಲ್ಲಿ ಕೇಂದ್ರ ಉಪ ವಿಭಾಗದ ಎಸಿಪಿ, ಪಿ.ಐ, ಉರ್ವ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ ಎ೦ದು .
ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles