18.8 C
Karnataka
Friday, November 22, 2024

ತಾಪಮಾನ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳು

ಮಂಗಳೂರು:ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ.
ಭಾರತೀಯ ಹವಾಮಾನ ಇಲಾಖೆಯು 2024ರ ಏಪ್ರಿಲ್ 1 ರಂದು ಬಿಡುಗಡೆ ಮಾಡಿದ ಹವಾಮಾನ ಮಾಹೆಯಿಂದ ಮೇ 2024ರ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು ಸಾಮಾನ್ಯ ಮುನ್ಸೂಚನೆ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2 ರಿಂದ 14 ದಿನಗಳು, ಮೀರುವ ಸಾಧ್ಯತೆ ಇದೆ ಅಲ್ಲದೆ ಈಗಾಗಲೇ ರಾಜ್ಯದಲ್ಲಿ 223 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿರುವುದರಿಂದ ಅತಿ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಸಲಹೆಗಳನ್ನು ಅವಶ್ಯವಿರುತ್ತದೆ ಎಂದು ತೀರ್ಮಾನಿಸಲಾಗಿದೆ.

ಅತಿ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸೂಚನೆ:
ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆವರೆಗೆ) ಸಾಕಷ್ಟು ಕಾಲಕಾಲಕ್ಕೆ ನೀರು ಕುಡಿಯುವುದು ಹಗುರವಾದ ಬಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಯನ್ನು ಧರಿಸುವುದು ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು, ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ಹೊರಗೆ ಕೆಲಸ ಮಾಡುವುದು ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ಒಯ್ಯುವುದು ದೇಹವನ್ನು ನಿರ್ಜಲೀಕರಣ ಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು, ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು, ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು, ಮೂರ್ಛೆ ಅಥವಾ ಅನಾರೋಗ್ಯಾನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡುವುದು, ನಿಂಬೆರಸ, ಮಜ್ಜಿಗೆ ಮುಂತಾದ ಮನೆಗಳಲ್ಲಿ ತಯಾರಿಸ ಪಾನೀಯಗಳು ಮತ್ತು ಬಳಸುವುದು ಸಾಕು ಪ್ರಾಣಿಗಳ ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.
ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್ಗಳು ಅಥವಾ ಸನ್ ಶೆಡ್ ಗಳನ್ನು ಬಳಸುವುದು ಹಾಗೂ ಆಗಿಂದಾಗೆ ತಣ್ಣೀರು ಸ್ನಾನ ಮಾಡುವುದು ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ, ಟೋಪಿ ಅಥವಾ ಕ್ಯಾಪ್, ಎಲೆಕ್ಟ್ರೋಲೈಟ್, ಗ್ಲುಕೋಸ್, ಓ ಆರ್ ಎಸ್ ಒಳಗೊಂಡಿರುವ ಅತಿ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಕೊಂಡೊಯ್ಯಲು ಪ್ರೋತ್ಸಾಹಿಸುವುದು.

ಅತಿ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು:

   ಅತಿ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ ಶಾಖ ಸೆಳೆತ ಶಾಖದ ಬಳಕೆ ಮತ್ತು ಶಾಖದ ಆಘಾತದಂತಹ ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇರುತ್ತದೆ. ಶಾಖ ಸೆಳೆತವು ಎಡೆರ್ನಾ ಊತ ಮತ್ತು ಮೂರ್ಛೆ ಸಾಮಾನ್ಯವಾಗಿ 39 ಡಿಗ್ರಿ ಸೆ. ಅಂದರೆ 102 ಡಿಗ್ರಿ ಜಿ ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ. ಶಾಖದ ಬಳಲಿಕೆ ಆಯಾಸ ದೌರ್ಬಲ್ಯ ತಲೆ ತಿರುಗುವಿಕೆ, ತಲೆನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು. ದೇಹದ ಉಷ್ಣತೆಯು 40 ಡಿಗ್ರಿ ಸಿ ಅಂದರೆ 104 ಎಫ್ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

ಅತೀ ಹೆಚ್ಚು ತಾಪಮಾನ (ಹೀಟ್ ವೇವ್) ಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ:
ಅತೀ ಹೆಚ್ಚು ತಾಪಮಾನದಿಂದ (ಹೀಟ್ ವೇವ್) ತುತ್ತಾದ ವ್ಯಕ್ತಿಯನ್ನು ನರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸುವುದು / ತಂಪಾದ ಒದ್ದೆ ಬಟ್ಟೆಯನ್ನು ಹಾಕುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುವುದು. ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್ ಎಸ್ ನಿಂಬೆ ಪಾನಕ ನೀಡುವುದು (ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ). ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸುವುದು. ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪುಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸುವುದು. ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.

ಅತೀ ಹೆಚ್ಚು ತಾಪಮಾನಕ್ಕೆ ((ಹೀಟ್ ವೇವ್) ಸಂಬಂಧಿತ ಅನಾರೋಗ್ಯವನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳು:

ಅತೀ ಹೆಚ್ಚು ತಾಪಮಾನಕ್ಕೆ, (ಹೀಟ್ ವೇವ್) ಸಂಬಂಧಿಸಿದಂತೆ ಐಎಮ್‍ಡಿ ಮತ್ತು ಕೆ.ಎಸ್.ಎನ್.ಡಿ.ಎಮ್.ಸಿ ಯಿಂದ ನೀಡಿದ ಮುನ್ಸೂಚನೆ / ಎಚ್ಚರಿಕೆಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವುದು. ಅತೀ ಹೆಚ್ಚು ತಾಪಮಾನದ (ಹೀಟ್ ವೇವ್) ಪ್ರತಿಕೂಲ ಪರಿಣಾಮಗಳ ಬಗ್ಗೆ, ಅರಿವು ಮೂಡಿಸಲು ಮತ್ತು ಅತೀ ಹೆಚ್ಚು, ತಾಪಮಾನದ (ಹೀಟ್ ವೇವ್) ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ತಯಾರಿಸಿರುವ ಟಿಇಸಿ ಸಕ್ರಿಯಗೊಳಿಸುವುದು. ನಗರ, ಪಟ್ಟಣ, ಕೊಳಚೆ ಪ್ರದೇಶಗಳು, ಅತೀ ಹೆಚ್ಚು ತಾಪಮಾನಕ್ಕೆ (ಹೀಟ್ ವೇವ್) ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು.
ಮಾರುಕಟ್ಟೆಗಳು, ಬಸ್ ನಿಲ್ದಾಣಗಳು / ಬಸ್ ಟರ್ಮಿನಲ್‍ಗಳು ಮತ್ತು ಜನರು ಸೇರುವ ಇತರ ಆಯಕಟ್ಟಿನ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನೆರಳಿನ ಸೌಲಭ್ಯ ಕಲ್ಪಿಸುವುದು. ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ. ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡುವುದು. ವಾಹನ ಚಾಲಕರಿಗೆ ಅವರ ಕುಡಿಯುವ ನೀರನ್ನು ಒದಗಿಸುವುದು ಹಾಗೂ. ರಾಜ್ಯದಲ್ಲಿ ಅತೀ ಹೆಚ್ಚು, ತಾನಮಾನದ (ಹೀಟ್ ವೇವ್) ಪರಿಸ್ಥಿತಿಗಳ ಬಗ್ಗೆ ಪ್ರವಾಸಿಗರಿಗೆ ಸಲಹೆಗಳನ್ನು ಪ್ರಚಾರ ಮಾಡುವುದು. ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತವಡಿಸಿಕೊಳ್ಳುವುದು ಹಾಗೂ ತಾತ್ಕಾಲಿಕ ನೆರಳಿನ ಪ್ರದೇಶಗಳನ್ನು ನಿರ್ಮಿಸುವುದು.
ಸಾಮೂಹಿಕ ಸಭೆಯ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನೆರಳಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು, ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಬೇಕು, ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು, ಸಾಕಷ್ಟು ಓಆರ್ ಎಸ್ ಮತ್ತು ಇತರ ಔಷಧಿಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ, (ಹೀಟ್ ವೇವ್) ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ಸ್ಥಳವನ್ನು ಖಚಿತಪಡಿಸಿಕೊಳ್ಳಬೇಕು. ಅನುಕೂಲಕರ ತಾಪಮಾನವನ್ನು ಖಚಿ ತಪಡಿಸಿಕೊಳ್ಳಲು ಮತ್ತು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಫ್ಯಾನ್/ ಏರ್ಕೂಲರ್‍ಗಳು ಇರಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ / ಸಮಾರಂಭಗಳನ್ನು ತಂಪಾದ ವಾತಾವರಣವಿರುವ ಅವಧಿಯಲ್ಲಿ (ಬೆಳಗೆ, ಅಥವಾ ಸಂಜೆ) ನಿಗದಿಪಡಿಸುವುದು. ಜಿಲ್ಲಾಧಿಕಾರಿಗಳು / ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು ತಮ್ಮ ಜಿಲ್ಲೆಗೆ ಸಂಬಂಧಿಸಿದ ಅತೀ ಹೆಚ್ಚು ತಾಪಮಾನ (ಹೀಟ್ ವೇವ್) ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಪರಿಣಾಮಕಾರಿಯಾಗಿ ಅನುಷ್ಠಾಗೊಳಿಸುವುದು.

ಕುಡಿಯುವ ನೀರಿನ ಲಭ್ಯತೆ:
ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು, ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಜಲಾಶಯಗಳಲ್ಲಿ ಇರುವ ನೀರಿನ ಸಂಗ್ರಹಣೆಯನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಆಧ್ಯತೆಯ ಮೇರೆಗೆ ಕಾಯ್ದಿರಿಸುವುದು. ಹಿಂದಿನ ವರ್ಷಗಳ ಮಾಹಿತಿಯ ಆಧಾರದ ಮೇಲೆ ಕುಡಿಯುವ ನೀರಿನ ಕೊರತೆ ಉಂಟಾಗುವ ಗ್ರಾಮಗಳನ್ನು ಈಗಾಗಲೆ ಗುರುತಿಸಲಾಗಿದ್ದು, ಈ ಗ್ರಾಮಗಳ ವಸ್ತುಸ್ಥಿತಿಯ ಮೇಲೆ ನಿಗಾವಹಿಸುವುದು. ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮತ್ತು ಖಾಸಗಿ ಬೋರ್‍ವೆಲ್ ಗುರುತಿಸಿ ಅವುಗಳ ಮೂಲಕ ಕುಡಿಯುವ ನೀರಿನ ಕೊರತೆಯನ್ನು ಅಗತ್ಯತೆಗೆ ಅನುಗುಣವಾಗಿ ನೀಗಿಸಲು ಈಗಾಗಲೇ ಕ್ರಮ ವಹಿಸಲಾಗಿರುತ್ತದೆ. ಪರ್ಯಾಯ ಕಾರ್ಯತಂತ್ರವನ್ನು (ಕಾಂಟಿಂಜೆನ್ಸಿ ಯೋಜನೆ) ಈಗಾಗಲೆ ರೂಪಿಸಲಾಗಿದ್ದು ಆಧ್ಯತೆ ಮೇಲೆ ಹಾಗೂ ಅಗತ್ಯತೆಗೆ ತಕ್ಕಂತೆ ಇದನ್ನು ಅನುಷ್ಠಾನ ಮಾಡುವುದು.
ಕುಡಿಯುವ ನೀರಿನ ಉದ್ದೇಶಕ್ಕಾಗಿ ಗ್ರಾಮ ಅಥವಾ ಪಟ್ಟಣಕ್ಕೆ ಅಗತ್ಯವಿರುವಷ್ಟು ನೀರನ್ನು ನಿಯಮಾನುಸಾರ ಪೈಪ್ ಲೈನ್ ಮೂಲಕ ಪೂರೈಸುವುದು. ಅಸ್ತಿತ್ವದಲ್ಲಿರುವ ನೀರು ಸರಬರಾಜು ಯೋಜನೆಗಳ ವಿದ್ಯುತ್ ಪಂಪ್‍ಗಳು, ಕೈ ಪಂಪುಗಳ ದುರಸ್ತಿ, ಕಡಿಮೆ ನೀರಿನ ಲಭ್ಯತೆ ಇರುವ ಬೋರ್‍ವೆಲ್‍ಗಳನ್ನು ಪ್ರಶಿಂಗ್ ಮಾಡುವುದು ಮತ್ತು ಆಳಗೊಳಿಸುವುದು ಮತ್ತು ಆರ್ ಒ ಪ್ಲಾಂಟ್‍ಗಳ ನಿರ್ವಹಣೆ ಇತ್ಯಾದಿಗಳನ್ನು ಆದ್ಯತೆಯ ಮೇಲೆ ಈಗಾಗಲೆ ತೆಗೆದುಕೊಳ್ಳಲಾಗಿದ್ದು ಇದರ ಮೇಲೆ ನಿಗಾವಹಿಸುವುದು. ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಸಭೆಗಳನ್ನು ಪ್ರತಿವಾರ ನಡೆಸುತ್ತಿದ್ದು ಇದನ್ನು ಮುಂದುವರೆಸುವುದು.

ಅತೀ ಹೆಚ್ಚು ತಾಪಮಾನ (ಹೀಟ್ ವೇವ್) ಸಮಯದಲ್ಲಿ ಬೆಂಕಿಯ ತಡೆಗಟ್ಟುವಿಕೆ:

ಆಸ್ಪತ್ರೆಗಳು, ಕೈಗಾರಿಕೆಗಳು, ಜನಸಂದಣಿ ಸ್ಥಳಗಳು ಇತ್ಯಾದಿಗಳಲ್ಲಿ ಅಗ್ನಿ ಸುರಕ್ಷತೆಯ ವಿವಿಧ ಅಂಶಗಳ ಮೇಲೆ ಆಗಾಗೆ ತಪಾಸಣೆ ಕೈಗೊಳ್ಳುವುದು. ಆಗಿ ಸುರಕ್ಷತೆಗೆ ತರಬೇತಿಗಳನ್ನು ಕೈಗೊಳ್ಳುವುದು. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್ ಕಡ್ಡಾಯವಾಗಿ ನಡೆಸುವುದು. ಅತೀ ಹೆಚ್ಚು ತಾಪಮಾನ (ಹೀಟ್ ವೇವ್) ತಡೆಗಟ್ಟುವ ಕುರಿತಂತೆ ಇಲಾಖಾವಾರು ಕರ್ತವ್ಯ / ಜನಾಬ್ದಾರಿಗಳನ್ನು ಅತೀ ಹೆಚ್ಚು, ತಾಪಮಾನದ ಕ್ರಿಯಾ ಯೋಜನೆಗಳಲ್ಲಿ ನಿಗದಿಪಡಿಸಲಾಗಿರುತ್ತದೆ ಎಂದು ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles