26.5 C
Karnataka
Wednesday, January 8, 2025

ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

ಮ೦ಗಳೂರು: ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲೆಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.
ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ಕಾಯಾ೯ಚರಣೆ ನಡೆಸುತ್ತಿತ್ತು. ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.
ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಆಕಷ೯ಕವಾಗಿ ವೀಕ್ಷಿಸಬಹುದಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು, ಪ್ರತಿ ವ್ಯಕ್ತಿಗೆ ರೂ. 4,500/- ದರ ನಿಗದಿಪಡಿಸಲಾಗಿದೆ.

ಹೆಲಿಕಾಫ್ಟರ್‍ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್‍ಗಾಗಿ ವೆಬ್‍ಸೈಟ್ www.helitaxii.com (ಮೊಬೈಲ್ ಸಂಖ್ಯೆ:- 9400399999 / 7483432752) ಸಂಪರ್ಕಿಸಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles