26.6 C
Karnataka
Friday, April 4, 2025

ಹೆದ್ದಾರಿ ಭೂಸ್ವಾಧೀನ- ಮಾರ್ಚ್ 20 ರಂದು ಪರಿಹಾರ ಪಾವತಿ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಸಾಣೂರು ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಮಾರ್ಚ್ 20 ರಂದು ಬೆಳಿಗ್ಗೆ 10.30 ಗಂಟೆಗೆ ಗಂಜಿಮಠ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ತೆಂಕ ಎಡಪದವು, ಬಡಗ ಎಡಪದವು, ಬಡಗ ಉಳಿಪಾಡಿ, ತೆಂಕ ಉಳಿಪಾಡಿ, ಮೂಡುಪೆರಾರ, ಕಂದಾವರ ಮೂಳೂರು, ಅಡ್ಡೂರು,ತಿರುವೈಲು, ಕುಡುಪು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಪರಿಹಾರ ಮೊತ್ತವನ್ನು ಪಡೆಯಬಹುದು.
ಅದಾಲತ್ ಕಾರ್ಯಕ್ರಮದಲ್ಲಿ ಪರಿಹಾರ ಪಡೆಯಲು ಕ್ಲೈಮ್ ಸಲ್ಲಿಸಿದ ಭೂಮಾಲೀಕರು ಅವಾರ್ಡ್ ನೋಟಿಸ್‍ನಲ್ಲಿ ತಿಳಿಸಿರುವ ದಾಖಲೆಗಳೊಂದಿಗೆ ಹಾಜರಾಗಿ ಕ್ಲೈಮ್ ಸಲ್ಲಿಸುವಂತೆ ಹಾಗೂ ಈಗಾಗಲೇ ಕ್ಲೈಮ್ ಸಲ್ಲಿಸಿದ ಭೂಮಾಲೀಕರು ಹಾಜರಾಗಿ ಅಗತ್ಯ ದಾಖಲೆಗಳಿಗೆ ಸಹಿ ಮಾಡಬೇಕು.ಈ ಅದಾಲತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭೂ ಸಂತ್ರಸ್ತರು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಶೇಷ ಭೂಸ್ವಾಧೀನಾಧಿಕಾರಿ ಮುಹಮ್ಮದ್ ಇಸಾಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles