ಮಂಗಳೂರು: ಹಿಂದಿ ಭಾಷೆಯು ಸರಳವಾಗಿದ್ದು ಇದರ ಕಲಿಕೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅವಕಾಶವನ್ನು ಹೆಚ್ಚಿಸುತ್ತದೆ, ಎಂದು ಸಂತ ಅಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಉದಯ್ ಕುಮಾರ್ ಬಿ ಅಭಿಪ್ರಾಯಪಟ್ಟರು.
ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಹಿಂದಿ ಸಂಘದ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾಷೆಯ ಮಹತ್ವವನ್ನು ತಿಳಿಸುವ ಜೊತೆಗೆ, ಮನುಷ್ಯನ ಭಾವನೆಗಳನ್ನು ವ್ಯಕ್ತಪಡಿಸುವಲ್ಲಿ ಭಾಷೆಯು ಪಾತ್ರ ನಿರ್ಣಾಯಕ, ಎಂದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಆಶಾಲತಾ ಎಸ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂ ಎಸಿ ಸಂಯೋಜಕ ಯತಿನ್ ಉಪಸ್ಥಿತರಿದ್ದರು. ಹಿಂದಿ ವಿಭಾಗ ಮುಖ್ಯಸ್ಥ ಉಮೇಶ್ ಹೆಗಡೆ ಸ್ವಾಗತಿಸಿದರು, ಪ್ರಣಮ್ ಎ ರೈ ವಂದಿಸಿದರು, ಸುಮಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.