18.2 C
Karnataka
Friday, January 10, 2025

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ದ.ಕ ರಾಜ್ಯದಲ್ಲಿ ಅಗ್ರಸ್ಥಾನ- ಭರತ್ ಮುಂಡೋಡಿ

ಮಂಗಳೂರು: ಗ್ಯಾರಂಟಿ ಯೋಜನೆಯ ಅನುಷ್ಠಾನದ ಬಳಿಕ ಕರ್ನಾಟಕ ರಾಜ್ಯ ಜಿಡಿಪಿ ಸೂಚ್ಯಂಕದ ಪ್ರಕಾರ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ಆರು ತಿಂಗಳು ಕಳೆಯುವುದರೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಗಳನ್ನು ಜಾರಿ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಅಗ್ರಸ್ಥಾನದಲ್ಲಿದೆ ಎಂದು ದಕ್ಷಿಣ ಕನ್ನಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಮಾಧ್ಯಮ ಸಂವಾದ ಗೋಷ್ಠಿಯಲ್ಲಿಂದು ಗ್ಯಾರಂಟಿ ಯೋಜನೆಗಳ ಬಗ್ಗೆ ಅವರು ವಿವರಣೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷನಾಗಿ ಕರ್ತವ್ಯ ನಿರ್ವಹಿಸುವ ಅವಕಾಶವನ್ನು ನನಗೆ ನೀಡಿದ ಬಳಿಕ ತಾಲೂಕು ಸಮಿತಿಗಳನ್ನು ರಚನೆ ಮಾಡಿ
ಕಚೇರಿಗಳನ್ನು ಆರಂಭಿಸಿದೆ.ಬಳಿಕ ಯೋಜನೆಯನ್ನು ಹೆಚ್ಚು ಪರಿಣಾಮಕಾರಿ ಅನುಷ್ಠಾನ ಮಾಡಲು ಸಾಧ್ಯವಾಗಿದೆ.ಗೃಹ ಜ್ಯೋತಿ ಯೋಜನೆಯಲ್ಲಿದ.ಕ ಜಿಲ್ಲೆ ಶೇ 98 ಪ್ರಗತಿ ಸಾಧಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ.ಈ ಯೋಜನೆಯ ಮೂಲಕ 5.51 ಲಕ್ಷ ಫಲಾನುಭವಿಗಳಿಗೆ 2023-24 ನೆ ಸಾಲಿನಲ್ಲಿ ರೂ. 276.87 ಕೋಟಿ,ಹಾಗೂ 2024ರ ನವೆಂಬರ್ ವರೆಗೆ282.3ಕೋಟಿ ರೂ ಮೊತ್ತದ ಉಚಿತ ವಿದ್ಯುತ್ ನೀಡಲಾ ಗಿದೆ.ಗೃಹಲಕ್ಷ್ಮಿ ಯೋಜನೆಯಲ್ಲಿ 3,72,300 ಮಹಿಳೆಯರು ರೂ.943.41ಕೋಟಿ ಆರ್ಥಿಕ ಸಹಾಯ ಪಡೆದಿರುತ್ತಾರೆ. ಶಕ್ತಿ ಯೋಜನೆ ಯಲ್ಲಿ 6 ಕೋಟಿ 79 ಲಕ್ಷ ಮಹಿಳೆಯರು ಪ್ರಯಾಣ ಮಾಡಿ 219.86 ಕೋಟಿ ಆರ್ಥಿಕ ನೆರವು ಪಡೆದಿರುತ್ತಾರೆ‌.ಯುವನಿಧಿ ಯೋಜನೆ ಯಡಿ 4240 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು 3643 ಫಲಾನುಭವಿಗಳು ರೂ 3,87,94,500 ನಿರುದ್ಯೋಗ ಭತ್ತೆ (ಅಕ್ಟೋಬರ್‌ 2024 ರವರೆಗೆ) ಪಡೆದಿರುತ್ತಾರೆ. ಅನ್ನ ಭಾಗ್ಯ ಯೋಜನೆಯಡಿಯಲ್ಲಿ 2,59,730 ಪಡಿತರ ಚೀಟಿ ಹೊಂದಿದವರ ಖಾತೆಗೆ 5.61 ಲಕ್ಷ ಅರ್ಹ ಫಲಾನುಭವಿಗಳಿದ್ದು 282.03 ಕೋಟಿ ವರ್ಗಾವಣೆ ಸೇರಿ ದಕ್ಷಿಣ ಕನ್ನಡ ಜಿಲ್ಲೆಗೆ 1464 ಕೋಟಿ 21 ಲಕ್ಷದ 94,500 ಹಣ ಬಂದಿದೆ ಎ೦ದವರು ವಿವರಿಸಿದರು.
ದಕ್ಷಿಣ ಕನ್ನಡದ ಪತ್ರಕರ್ತರ ಸಂಘಗ್ರಾಮ ವಾಸ್ತವ್ಯದ ಮೂಲಕ ಗ್ರಾಮದ ಜನರಿಗೆ ನೆರವಾಗುವ ಶ್ಲಾಘನೀಯ ಕಾರ್ಯ ಮಾಡುತ್ತಿದೆ.ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿರೀಕ್ಷೆಗೂ ಮೀರಿ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದೆ. ಮಡಪ್ಪಾಡಿಯಲ್ಲಿ ನಡೆದಿದ್ದ ಗ್ರಾಮ ವಾಸ್ತವ್ಯದಿಂದ ಊರಿಗೆ ಸುಸಜ್ಜಿತ ರಸ್ತೆ ಸಹಿತ ಅನೇಕ ಯೋಜನೆಗಳು ಜಾರಿಯಾಗಿವೆ. ಇದಕ್ಕಾಗಿ ಅಭಿನಂದನೆಗಳು“ ಎಂದರು.
ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಉಪಸ್ಥಿ ತರಿದ್ದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ವಂದಿಸಿದರು.

 i

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles