22 C
Karnataka
Monday, March 3, 2025

ಬ್ರಹ್ಮಾವರದ ಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎ೦ ಉದ್ಘಾಟನೆ

ಮ೦ಗಳೂರು: ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, ೧೦ ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಎ೦ ಉದ್ಘಾಟಣಾ ಸಮಾರಂಭ ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಎಂ.ಸಿ.ಸಿ. ಬ್ಯಾಂಕಿನ ೮ನೇ ಎಟಿಎ೦ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹೋಲಿ ಫ್ಯಾಮಿಲಿ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ| ಜೋನ್ ಫೆರ್ನಾಂಡಿಸ್ ಆಶೀರ್ವದಿಸಿದರು. ಎಟಿಎ೦ ಯಂತ್ರವನ್ನು ಎಎಸ್ ಯೂಸ್ಡ್ ಕರ‍್ಸ್ ಇದರ ಮ್ಹಾಲಕ ಸೌರಬ್ ಶೆಟ್ಟಿ ಎಟಿಎ೦ನಿಂದ ಹಣ ತೆಗೆಯುವ ಮೂಲಕ ಉದ್ಘಾಟಿಸಿದರು. ಉದ್ಯಮಿ ಶಂಶುದ್ದಿನ್ ಮೊÊದಿನ್ ಮುಖ್ಯ ಅತಿಥಿಯಾಗಿದ್ದರು ಹಾಗೂ ಶಾಖಾ ನಿರ್ದೇಶಕ ಎಲ್‌ರೋಯ್ ಕಿರಣ್ ಕ್ರಾಸ್ಟೊ ಸಮಾರಂಭದಲ್ಲಿ ಹಾಜರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಬ್ರಹ್ಮಾವರದಲ್ಲಿ ಶಾಖೆಯು ಆರಂಭಗೊಳ್ಳಲು ಹಾಗೂ ರೂ. 10 ಕೋಟಿ ವ್ಯವಹಾರ ದಾಖಲಿಸಲು ಸಹಕರಿಸಿದ ಬ್ರಹ್ಮಾವರದ ಗ್ರಾಹಕರಿಗೆ ವಂದನೆಗಳನ್ನು ಸಲ್ಲಿಸಿದರು. ಬ್ರಹ್ಮಾವರದ ಜನತೆ ನೀಡಿದ ಸಹಕಾರದಿಂದ ಬ್ರಹ್ಮಾವರ ಶಾಖೆಯು ಈ ಸಾಧನೆ ಮಾಡಲು ಸಾಧ್ಯವಾಯಿತು. ಶಾಖೆಯಲ್ಲಿ ಉತ್ತಮ ಸೇವೆ ಮತ್ತು ವಿಶ್ವಾಸರ್ಹತೆಯನ್ನು ಗಳಿಸುವಲ್ಲಿ ಯಶಸ್ವಿಯಾದರೆ ಮಾತ್ರ ಸಾಧನೆ ಮಾಡಲು ಸಾದ್ಯ. ಇದಕ್ಕಾಗಿ ಬ್ರಹ್ಮಾವರ ಶಾಖೆಯ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿ ಮುಂದಿನ ವರ್ಷ ೩೦ ಕೋಟಿ ವ್ಯವಹಾರವನ್ನು ದಾಖಲಿಸಿ, ಶಾಖೆಯು ಲಾಭ ಗಳಿಸುವಲ್ಲಿ ಗ್ರಾಹಕರು ಸಹಕರಿಸಲು ಮತ್ತು ಶಾಖೆಯ ಸಿಬ್ಬಂದಿ ಶ್ರಮಿಸಲು ಕರೆ ಕೊಟ್ಟರು. ಕಳೆದ ವರ್ಷ ಶಾಖೆಯ ಉದ್ಘಾಟನಾ ಸಂದರ್ಭದಲ್ಲಿ ಆಶೀರ್ವಚಿಸಿದ ಧರ್ಮಗುರುಗಳಾದ ವಂ. ಫಾ| ಜೋನ್ ಫೆರ್ನಾಂಡಿಸ್ ಅವರಿಗೆ ವಂದನೆಗಳನ್ನು ಸಲ್ಲಿಸಿದರು.

ನೂತನ ಎಟಿಎಮ್‌ನ್ನು ಆಶೀರ್ವಚಿಸಿ ಮಾತನಾಡಿದ ವಂದನೀಯ ಫಾ| ಜೋನ್ ಫೆರ್ನಾಂಡಿಸ್ ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿ, ಸಿಬ್ಬಂದಿ ಮತ್ತು ಗ್ರಾಹಕರಿಗೆ ಶುಭ ಹಾರೈಸಿದರು.
ಶಾಖೆಯ ವಾರ್ಷಿಕೋತ್ಸವ ಸಂದರ್ಭವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ರೂ. ೧೦ ಕೋಟಿ ವ್ಯವಹಾರದ ಸಾಧನೆ ಮಾಡಿದ ಶಾಖೆಯ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ಅವರನ್ನು ಸನ್ಮಾನಿಸಲಾಯಿತು. ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಜೆರಾಲ್ಡ್ ಗೊನ್ಸಾಲ್ವಿಸ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ನಿರ್ದೇಶಕರಾದ ಡಾ| ಜೆರಾಲ್ಡ್ ಪಿಂಟೊ ಸ್ವಾಗತಿಸಿ, ಮಹಾಪ್ರಬಂಧಕ ಸುನಿಲ್ ಮಿನೆಜಸ್ ವಂದಿಸಿದರು. ಶಾಖಾ ವ್ಯವಸ್ಥಾಪಕ ಒವಿನ್ ರೆಬೆಲ್ಲೊ ನಿರೂಪಿಸಿದರು. ಉಡುಪಿ ಶಾಖಾ ವ್ಯವಸ್ಥಾಪಕ ಪ್ರದೀಪ್ ಡಿಸೋಜ, ಶಿರ್ವ ಶಾಖಾ ವ್ಯವಸ್ಥಾಪಕಿ ಅನ್ಸಿಲ್ಲಾ ಫೆರ್ನಾಂಡಿಸ್, ಕುಂದಾಪುರ ಶಾಖಾ ವ್ಯವಸ್ಥಾಪಕಿ ಜ್ಯೋತಿ ಬಾರೆಟ್ಟೊ ಹಾಗೂ ಗ್ರಾಹಕರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles