ಮಂಗಳೂರು: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2025-26ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 31. ಕಾರ್ಮಿಕರ ಮಾಸಿಕ ವೇತನ ರೂ. 35,000 ಗಿಂತ ಮೀರಿರಬಾರದು. (ಒಂದು ಕುಟುಂಬದಲ್ಲಿ ಇಬ್ಬರು ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ)
ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ಮುಖಾಂತರ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್ www.klwbapps.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. (ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ. 50, ಪ.ಜಾ/ಪ.ಪಂ. 45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು)
ಹೆಚ್ಚಿನ ಮಾಹಿತಿಗೆ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತೀಕೆರೆ ಮುಖ್ಯ ರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402, 9141602562 ಮೂಲಕ ಸಂಪರ್ಕಿಸ ಬಹುದು ಎಂದು ಕಾರ್ಮಿಕ ಇಲಾಖೆ ಪ್ರಕಟಣೆ ತಿಳಿಸಿದೆ.


