20.7 C
Karnataka
Thursday, January 30, 2025

ಅಸಂಘಟಿತ ಕಾರ್ಮಿಕರಿಗೆ ಮಾಹಿತಿ ಮತ್ತು ನೋಂದಣಿ ಅಭಿಯಾನ

ಮಂಗಳೂರು: ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಫೆಬ್ರವರಿ 3 ರಂದು ಬೆಳಿಗ್ಗೆ 10 ಗಂಟೆಗೆ ಲಾಲ್‍ಬಾಗ್ ಮಹಾನಗರ ಪಾಲಿಕೆ ಕಛೇರಿ ಆವರಣದಲ್ಲಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಕಛೇರಿ ಸಭಾಂಗಣದಲ್ಲಿ ಮಾಹಿತಿ ಮತ್ತು ನೋಂದಣಿ ಅಭಿಯಾನ ಆಯೋಜಿಸಲಾಗಿದೆ.
ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಗುರುತಿಸಲಾದ ಚಾಲಕ, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್ ಗುಮಾಸ್ತ, ನಗದು ಗುಮಾಸ್ತ, ಡಿಪೋ ಗುಮಾಸ್ತ, ಸಮಯ ಪಾಲಕ ಕಾವಲುಗಾರ ಅಥವಾ ಪರಿಚಾರಕ, ಮೋಟಾರು ಗ್ಯಾರೇಜುಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ, ಪಂಚರ್ ದುರಸ್ತಿ ಮಳಿಗೆಗಳಲ್ಲಿ, ವೀಲ್ ಬ್ಯಾಲೆನ್ಸಿಂಗ್ ಮತ್ತು ಅಲೈನ್ಮೆಂಟ್ ಘಟಕಗಳಲ್ಲಿ, ನೀರಿನಿಂದ ಸ್ವಚ್ಚಗೊಳಿಸುವ ಘಟಕಗಳಲ್ಲಿ ಕೆಲಸ ಮಾಡುವವರು ಮೋಟಾರು ವಾಹನ ಹೊರಕವಚ ನಿರ್ಮಾಣ ಘಟಕಗಳಲಿ,್ಲ ಟಿಂಕರಿಂಗ್, ಎಲೆಕ್ಟ್ರಿಕಲ್ ಹಾಗೂ ಎಸಿ ಘಟಕ ಇತ್ಯಾದಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದು.

ನೋಂದಣಿಗೆ ಬೇಕಾದ ಅರ್ಹತೆಗಳು: ಕರ್ನಾಟಕದವರಾಗಿರಬೇಕು, 18 ರಿಂದ 60 ವರ್ಷದೊಳಗಿರಬೇಕು, ಆದಾಯ ತೆರಿಗೆ ಪಾವತಿದಾರರಾಗಿರಬಾರದು, ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರದ ಎಲ್ಲಾ ಅರ್ಹ ಅಸಂಘಟಿತ ಕಾರ್ಮಿಕರು ಅಗತ್ಯ ದಾಖಲೆಗಳಾದ ಫೋಟೋ, ಆಧಾರ್, ಬ್ಯಾಂಕ್ ಖಾತೆಯ ವಿವರಗಳೊಂದಿಗೆ, ಮೊಬೈಲ್ ದೂರವಾಣಿಯೊಂದಿಗೆ (ಊರ್ಜಿತ ಬ್ಯಾಡ್ಜ ಹೊಂದಿರುವುದು ಕಡ್ಡಾಯ-ಡ್ರೈವರ್ ವೃತ್ತಿಯಲ್ಲಿರುವವರಿಗೆ ಮಾತ್ರ ಅನ್ವಯಿಸುವುದು) ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ನೋಂದಣಿ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಮಂಗಳೂರು 1 ಮತ್ತು 2 ನೇ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles