22.8 C
Karnataka
Sunday, June 15, 2025

ಸ್ಕ್ಯಾನಿಂಗ್ ಸೆಂಟರ್‌ ಗಳ ನಿರಂತರ ತಪಾಸಣೆಗೆ ಸೂಚನೆ

ಮಂಗಳೂರು : ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಗಿಂದಾಗ್ಗೆ ಭೇಟಿ ಪರಿಶೀಲನೆ ನಡೆಸಲು ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಸೂಚಿಸಲಾಗಿದೆ.
ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಸ್ಕ್ಯಾನಿಂಗ್ ಸಂಸ್ಥೆಗಳಲ್ಲಿ ಎಂಪ್ಯಾನೆಲ್‍ಮೆಂಟ್ ಇಲ್ಲದೆ ರೇಡಿಯೋಲಜಿಸ್ಟ್, ಗೈನಕಾಲಜಿಸ್ಟ್, ಕಾರ್ಡಿಯೊಲಜಿಸ್ಟ್ ಅಥವಾ ಯಾವುದೇ ತಜ್ಞ ವೈದ್ಯರು ಸ್ಕ್ಯಾನಿಂಗ್ ಮಾಡಿದರೆ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಸೂಚಿಸಿದರು.
ಏಪ್ರಿಲ್ 2025 ರಲ್ಲಿ ಖಾಸಗಿ 53 ಹಾಗೂ ಸರ್ಕಾರಿ 5 ಸ್ಕ್ಯಾನಿಂಗ್ ಸೆಂಟರ್‍ಗಳ ತಪಾಸಣೆ ನಡೆಸಿದ್ದು ತಾಲೂಕು ಆರೋಗ್ಯಾಧಿಕಾರಿಗಳು ಖಾಸಗಿ 6 ಹಾಗೂ ಸರ್ಕಾರಿ 2 ಸ್ಕ್ಯಾನಿಂಗ್ ಸೆಂಟರ್‍ಗಳ ತಪಾಸಣೆ ನಡೆಸಿದ್ದಾರೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ ಪ್ರಭು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ಅಮೃತಾ ಭಂಡಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಡಾ. ನಂಜೇಶ್ ಕುಮಾರ್, ವಸಂತ ಪೆರಾಜೆ, ನ್ಯಾಯವಾದಿ ಚಂದ್ರಹಾಸ ಕೆ., ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles