24.9 C
Karnataka
Thursday, April 30, 2026

ಭವನಗಳ ಕಾಮಗಾರಿ ತ್ವರಿತಗೊಳಿಸಲು ಸ್ಪೀಕರ್ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಭಾಷೆಮತ್ತು ಸಾಹಿತ್ಯ ಭವನಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಪೂರ್ಣಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಭವನಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ ತುಳು ಭವನದ ಹಲವು ಕಾಮಗಾರಿ ಬಾಕಿ ಇರುತ್ತದೆ. ಕೊಂಕಣಿ ಭವನದ ಕಾಮಗಾರಿ ಅರ್ಧದಲ್ಲಿ ನಿಂತಿದೆ. ಬ್ಯಾರಿ ಭವನಕ್ಕೆ ನಿವೇಶನ ಗುರುತಿಸಿದ್ದು, ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಈ ಎಲ್ಲಾ ಭವನಗಳಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅನುದಾನ ನೀಡಿದ್ದು, ಈ ನಿಟ್ಟಿನಲ್ಲಿ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದ್ದಾರೆ.
ಜಿಲ್ಲಾ ರಂಗಮಂದಿರ ನಗರದ ಬೊಂದೆಲ್‍ನಲ್ಲಿ ನಿರ್ಮಾಣಗೊಳ್ಳಲಿದ್ದು, ಈಗಾಗಲೇ ಮಹಾನಗರಪಾಲಿಕೆ ಕಾಮಗಾರಿ ಟೆಂಡರ್ ಕರೆದಿರುತ್ತದೆ. ಕಾಸರಗೋಡು ಬದಿಯಡ್ಕದಲ್ಲಿ ಡಾ. ಕೈಯಾರ ಕಿಞ್ಞಣ್ಣ ರೈ ಸಭಾಭವನ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಕಿ ಇರುವ ವಿವಿಧ ಭವನಗಳ ಕಾಮಗಾರಿಗೆ ಹೆಚ್ಚುವರಿ ಅನುದಾನ ಕೋರಿ ಏಕ ಕಡತದಲ್ಲಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದರು.
ಸಭೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ, ಬೇವಿನಮರದ ಕಾರ್ಯದರ್ಶಿ ಪ್ರಕಾಶ್, ಸದಸ್ಯ ಎ.ಆರ್ ಸುಬ್ಬಯ್ಯನಕಟ್ಟೆ, ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ, ಅಪರ ಜಿಲ್ಲಾಧಿಕಾರಿ ರಾಜು ಕೆ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles