ಮಂಗಳೂರು: ನಗರದ ಕದ್ರಿಹಿಲ್ಸ್‍ನಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ 2024ನೇ ಸಾಲಿಗೆÀ ಮೆರಿಟ್ ಕಂ ರಿಸರ್ವೇಶನ್ ಆಧಾರಿತ ಪ್ರವೇಶವÀನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವೆಬ್‍ಸೈಟ್: www.cite.karnataka.gov.in ಅಥವಾ ಹೆಲ್ಪ್ ಡೆಸ್ಕ್ ಮೂಲಕ ಜೂನ್ 6 ರೊಳಗೆ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಆಯ್ಕೆ ಮಾಡಿರುವÀ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಜೂನ್ 4 ರೊಳಗೆ ಖುದ್ದಾಗಿ ಬೇಟಿ ನೀಡಿ ದಾಖಲಾತಿ ಪರಿಶೀಲನೆ ಮಾಡಬೇಕು.
ಹೆಚ್ಚಿನ ಮಾಹಿತಿಗೆ ಮಂಗಳೂರಿನ ಕದ್ರಿಹಿಲ್ಸ್‍ನಲ್ಲಿರುವ, ಸರ್ಕಾರಿ ಐ.ಟಿ.ಐ ಸಂಸ್ಥೆ ಆಥವಾ ದೂರವಾಣಿ ಸಂಖ್ಯೆ : 0824-2211285 ಸಂಪರ್ಕಿಸುವಂತೆ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶ: ಅರ್ಜಿ ಆಹ್ವಾನ
ಮಂಗಳೂರಿನ ಸರ್ಕಾರಿ ಐ.ಟಿ.ಐ ಮಹಿಳಾ ಸಂಸ್ಥೆಯಲ್ಲಿ 2024-25ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್: www.cite.karnataka.gov.in ಮೂಲಕ ಸ್ವತ: ಅರ್ಜಿ ಸಲ್ಲಿಸಬಹುದು ಅಥವಾ ಖುದ್ದಾಗಿ ಸಂಸ್ಥೆಗೆ ಭೇಟಿ ನೀಡಿ ಹೆಲ್ಪ್ ಡೆಸ್ಕ್ ಮೂಲಕವೂ ಜೂನ್ 3 ರೊಳಗೆ ಅರ್ಜಿ ಸಲ್ಲಿಸಬಹುದು.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಜೂನ್ 4ರಂದು ಖುದ್ದಾಗಿ ಭೇಟಿ ನೀಡಿ ಕಡ್ಡಾಯವಾಗಿ ದಾಖಲಾತಿ ಪರಿಶೀಲನೆ ಮಾಡಬೇಕು. ನಿಗದಿತ ಪ್ರಮಾಣದಲ್ಲಿ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೆ ಇದ್ದಲ್ಲಿ ಪುರುಷ ಅಭ್ಯರ್ಥಿಗಳಿಗೆ ಪ್ರವೇಶ ಪಡೆಯಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2216360, 9880119147 ಅಥವಾ 9448858417 ಸಂಪರ್ಕಿಸುವಂತೆ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.