16.7 C
Karnataka
Saturday, November 23, 2024

ಐವರ್ನಾಡು : ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ: ಮಾ.14 ರಂದು ರಾತ್ರಿ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಳ್ಯ ಮಂಡೆಕೋಲು ನಿವಾಸಿ ಸುಪೀತ್‌ ಕೆ (20) ಎಂಬಾತನನ್ನು ಪೊಲೀಸರು ಬ೦ಧಿಸಿದ್ದಾರೆ.ಆರೋಪಿಯಿ೦ದ 83,000/ ರೂ ಮೌಲ್ಯದ 209 ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000 ಮೌಲ್ಯದ ಆಟೋ ರಿಕ್ಷಾವನ್ನು ಸ್ವಾಧೀನಪಡಿಸಲಾಗಿದೆ.
ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಕಳವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.ಬೆಳ್ಳಾರೆ ಪೊಲೀಸ್‌ ಠಾಣಾ ಉಪನಿರೀಕ್ಷಕ ಬಿ.ಪಿ ಸಂತೋಷ್ ಹಾಗೂ ಠಾಣಾ ಸಿಬ್ಬಂದಿಗಳಾದ ನವೀನ ಕೆ , ಕೃಷ್ಣಪ್ಪ , ದೇವರಾಜ್‌ ,ಸಂತೋಷ್‌ ಕೆ ಜಿ , ಸುಭಾಸ್‌ ಕಿತ್ತೂರ , ಪುರಂದರ ಅವರುಗಳ ತನಿಖಾ ತಂಡ ಕಾರ್ಯಚರಣೆ ನಡೆಸಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles