22.1 C
Karnataka
Sunday, June 14, 2026

ಜ.10: ಸ್ವರಾನುಬಂಧ ಸಂಗೀತ ಉತ್ಸವ

ಮಂಗಳೂರು: ನಗರದ ನವ ಭಾರತ್ ಸರ್ಕಲ್ ಬಳಿಯಿರುವ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಜನವರಿ 10 ರಂದು ಮಧ್ಯಾಹ್ನ 3ರಿಂದ ರಾತ್ರಿ 8 ಗಂಟೆಯ ವರೆಗೆ ಸ್ವರಾನುಬಂಧ ಸಂಗೀತ ಉತ್ಸವ ನಡೆಯಲಿದೆ ಎಂದು ಕಲಾ ಸಾಧನ ಸಂಸ್ಥೆ ನಿರ್ದೇಶಕಿ ಶ್ರೀಮತಿ ವಿಭಾ ನಾಯಕ್ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು .
ಈ ಉತ್ಸವದಲ್ಲಿ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ, ಬಳಿಕ ಶ್ರೀಮತಿ ವಿಭಾ ಎಸ್. ನಾಯಕ್ ಮಂಗಳೂರು ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ.ತಬಲಾದಲ್ಲಿ ವಿಘ್ನೇಶ್ ಪ್ರಭು, ಹಾಗೂ ಹಾರ್ಮೋನಿಯಂ:ನಲ್ಲಿ ಮೇಧಾ ಜಿ. ಭಟ್ ಸಾಥ್ ನೀಡಲಿದ್ದಾರೆ.
ಸಿತಾರ್-ಕೊಳಲು-ತಬಲಾ ಜುಗಲ್ ಬಂಧಿ
ಉಸ್ತಾದ್ ರಫೀಕ್ ಖಾನ್ ಮತ್ತು ಪಿ. ಸಮೀರ್ ರಾವ್ ಅವರಿಂದ ಸಿತಾರ್ ಮತ್ತು ಕೊಳಲು ಜುಗಲ್ಬಂದಿ, ಪಂ. ರಾಜೇಂದ್ರ ನಾಕೋಡ್ ಅವರೊಂದಿಗೆ ನಡೆಯಲಿದೆ.ಯುವ ಕಲಾವಿದರಲ್ಲಿ ಸಂಗೀತದ ಕುರಿತು ಆಸಕ್ತಿ ಹೆಚ್ಚಿಸಲು ಹಾಗೂ ಅವರಿಗೆ ವೇದಿಕೆ ಕಲ್ಪಿಸಲು ಪ್ರತೀ ವರ್ಷ ಸಂಗೀತ ಉತ್ಸವ ಆಯೋಜಿಸಲಾಗುತ್ತಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಂಗೀತ ಕಾರ್ಯಕ್ರಮ ದಲ್ಲಿ ಎಲ್ಲರಿಗೂ ಉಚಿತ ಪ್ರವೇಶ ವಿದೆ .ಸಂಸ್ಥೆಯ ಗೌರವ ಸಲಹೆಗಾರ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles