ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಮಂಗಳವಾರ ಸುಳ್ಯದಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ.
ಸುಳ್ಯ ಕೆವಿಜಿ ಪುರಭವನದಲ್ಲಿ ನಡೆಯುವ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಉಸ್ತುವಾರಿ ಸಚಿವರು ಸ್ವೀಕರಿಸಿ, ಪರಿಹಾರ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ನಿAದ ವ್ಯವಸ್ಥಿತವಾದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಲಾಖಾವಾರು ಕೌಂಟರ್‌ಗಳನ್ನು ಸಿದ್ಧಗೊಳಿಸಲಾಗಿದ್ದು, ಒಟ್ಟು ೧೧ ಕೌಂಟರ್‌ಗಳನ್ನು ತೆರೆಯಲಾಗಿದೆ
ಈ ಜನತಾದರ್ಶನ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಲಾಗುವುದು. ಸಾರ್ವಜನಿಕರು ನೀಡಿದ ಅರ್ಜಿಯನ್ನು ಪಡೆಯಲು ವಿವಿಧ ಇಲಾಖೆಗಳಿಗಾಗಿ ಸ್ಥಳದಲ್ಲಿಯೇ ಕಳುಹಿಸಲಾಗುವುದು. ನಂತರ ಸಾರ್ವಜನಿಕರು ತಮ್ಮ ಸಮಸ್ಯೆ/ಅಹವಾಲುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಿ ಅವರಿಗೆ ಮೌಖಿಕವಾಗಿ ತಿಳಿಸಲು ವ್ಯವಸ್ಥೆ ಮಾಡಲಾಗುವುದು.
ಸಾರ್ವಜನಿಕರ ಸಮಸ್ಯೆಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥಪಡಿಸಿ, ಅಧಿಕಾರಿಗಳು ವರದಿ ಸಲ್ಲಿಸಬೇಕಿದೆ. ಸಾರ್ವಜನಿಕರು ಈ ಜನತಾದರ್ಶನದ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.