ಮಂಗಳೂರು: ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಜ. 5,6ಮತ್ತು 7 ರಂದು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಮ೦ಗಳೂರಿನಲಲಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಪತ್ರಿಕಾ ಭವನದಲ್ಲಿ ಮ೦ಗಳವಾರ ಜರಗಿದ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ ಕರಾವಳಿಯ ಸೌಹಾರ್ದ ಪರಂಪರೆಯ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆಯನ್ನು ರಾಜ್ಯಾದ್ಯಂತ ವಿಸ್ತರಣೆಗೆ ಈ ಪಂದ್ಯಾವಳಿ ಪೂರಕವಾಗಲಿದೆ ಎಂದರು.
ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜ ಮಾಡ ರಮೇಶ್ ಕುಟ್ಟಪ್ಪ ಭಾಗವಹಿಸಿ ಸಲಹೆ ಸೂಚನೆ ನೀಡಿ, ಈ ಕ್ರೀಡಾ ಕೂಟದಲ್ಲಿ 25 ಜಿಲ್ಲೆಯಲ್ಲಿ 500 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಕ್ರಿಕೆಟ್ ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಪ್ರತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಸಂಚಾಲಕರಾದ ರವೀಂದ್ರ ಶೆಟ್ಟಿ, ಪುಷ್ಪ ರಾಜ್ ಬಿ.ಎನ್, ಭಾಸ್ಕರ್ ರೈ ಕಟ್ಟ,ರಾಜೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.