22 C
Karnataka
Friday, November 15, 2024

ಬಹುನಿರೀಕ್ಷಿತ “ಕಲ್ಜಿಗ” ಸಿನೆಮಾ ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಮಾತನಾಡಿ , “ಕಲ್ಜಿಗ ಸಿನಿಮಾ ಕುರಿತು ಟೀಕೆ ಟಿಪ್ಪಣಿ ಬರುತ್ತಿದೆ. ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸೋಣ. ಸಿನಿಮಾ ನೋಡಿದವರು ನಮ್ಮ ತುಳುನಾಡಿನ ದೈವಗಳ ಕಾರಣಿಕವನ್ನು ಚೆನ್ನಾಗಿ ತೋರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನನ್ನ ಪ್ರಕಾರ ಸಿನಿಮಾದಲ್ಲಿ ದೈವಾರಾಧನೆಗೆ ಎಲ್ಲೂ ಅಪಚಾರ ಆಗಿರಲಿಕ್ಕಿಲ್ಲ. ನಾವು ತಪ್ಪು ಮಾಡದೆಯೂ ನಮಗೆ ಅನ್ಯಾಯವಾಗುವುದಾದರೆ ನಾನು ಚಿತ್ರತಂಡದ ಜೊತೆಗೆ ಇದ್ದೇನೆ“ ಎಂದರು.
ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತಾಡಿ, “ಅರ್ಜುನ್ ಕಾಪಿಕಾಡ್ ಅವರು ಅಭಿನಯಿಸಿದ ಸಿನಿಮಾದಲ್ಲಿ ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸುವ ಕೆಲಸ ನಡೆದಿದೆ. ತುಳುನಾಡಿನ ದೈವಗಳ ಪವಾಡವನ್ನು ತೋರಿಸಲಾಗಿದೆ. ನಾವೆಲ್ಲರೂ ಸಿನಿಮಾ ನೋಡಿ ಬೆಂಬಲಿಸಬೇಕು” ಎಂದರು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಪ್ರಕಾಶ್ ಧರ್ಮನಗರ, ತಮ್ಮ ಲಕ್ಷ್ಮಣ, ಉದ್ಯಮಿ ಗಿರೀಶ್ ಶೆಟ್ಟಿ ಕಟೀಲು, ನಟ ಅರ್ಜುನ್ ಕಾಪಿಕಾಡ್, ನಿರ್ಮಾಪಕ ಶರತ್ ಕುಮಾರ್ ಎ.ಕೆ., ನಿರ್ದೇಶಕ ಸುಮನ್ ಸುವರ್ಣಮತ್ತಿತರರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಸುಮಾರು ಐವತ್ತು ಟಾಕೀಸ್ ಗಳಲ್ಲಿ ಕಲ್ಜಿಗ ಸಿನಿಮಾ ತೆರೆಕಾಣಲಿದೆ. ದಕ್ಷಿಣ ಕನ್ನಡ , ಉಡುಪಿ , ಬೆಂಗಳೂರು , ಮೈಸೂರು , ಶಿವಮೊಗ್ಗ , ಚಿಕ್ಕಮಗಳೂರು , ಹಾಸನ , ಮಡಿಕೇರಿ , ಹುಬ್ಬಳ್ಳಿ , ಧಾರವಾಡ , ದಾವಣಗೆ ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗಲಿದೆ.
ಈಗಾಗಲೇ ಕಲ್ಜಿಗ ಚಿತ್ರದ ಟ್ರೈಲರ್ ಅನ್ನು ಯೂಟ್ಯೂಬ್ ನಲ್ಲಿ ಒಟ್ಟು 14 ಲಕ್ಷಕ್ಕಿಂತಲೂ ಹೆಚ್ಚು ಜನರು ವೀಕ್ಷಿಸಿದ್ದಾರೆ ಮಂಗಳೂರು ಸೀಮೆಯ ಕನ್ನಡ ಭಾಷಾ ಶೈಲಿಯಲ್ಲಿ ಚಿತ್ರ ತಯಾರಾಗಿದೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರದಲ್ಲಿ ಘಟಿಸುವ ರೋಚಕ ಕಥನ ಕಲ್ಜಿಗದಲ್ಲಿದೆ. ಸಚಿನ್ ಶೆಟ್ಟಿ ಛಾಯಾಗ್ರಹಣ , ಯಶ್ವಿನ್ ಕೆ ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನೀಲ್ ಗುರು ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ , ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ `ಕಲ್ಜಿಗ’ಕ್ಕೆ ಕೈ ಜೋಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles