17.5 C
Karnataka
Friday, November 22, 2024

ಡಿ.23ರಂದು ಅಂತರ ವೈದ್ಯಕೀಯ ಕಾಲೇಜು ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧೆ

ಮಂಗಳೂರು : ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ
ಆಶ್ರಯದಲ್ಲಿ ಸ್ನಾತಕೋತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ೩ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ
ಕಾಲೇಜು ರಸ ಪ್ರಶ್ನೆ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ – 2023 ಸ್ಪರ್ಧಾಕೂಟವನ್ನು ಶನಿವಾರ ಡಿ.23ರಂದು ರಂದು ಬೆ.10 ಗಂಟೆಗೆ
ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ
ವೈದ್ಯಕೀಯ ಶಾಸ್ತ್ರ ವಿಭಾಗದ ಸ್ನಾತಕೋತರ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡದ ಹೆಸರುಗಳನ್ನು
ಸ್ಪರ್ಧಾಕೂಟದಲ್ಲಿ ಭಾಗವಹಿಸಲು ನೋಂದಾಯಿಸಬಹುದು. ಈ ಸ್ಪರ್ಧಾ ಕೂಟವು ಕೇವಲ ಆಂತರಿಕ ವೈದ್ಯಕೀಯ ಶಾಸ್ತ್ರ
ವಿಷಯದ ಬಗ್ಗೆ ಸೀಮಿತ ಗೊಂಡಿದೆ.
ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಯು.ಕೆ. ಮೋನು ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು
ಸ್ಪರ್ಧಾ ವಿಜೇತರಿಗೆ ಆಕರ್ಷಕ ಪ್ರಶಸ್ತಿ, ಬಹುಮಾನ ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರಧಾನ ಮಾಡಲಿರುವರು.
ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರೆಹಮಾನ್, ಪ್ರಾಂಶುಪಾಲರಾದ ಪ್ರೋ| ಡಾ| ರತ್ನಾಕರ ಯು.ಪಿ. ವೈದ್ಯಕೀಯ
ಅಧೀಕ್ಷಕರಾದ ಪ್ರೋ ಡಾ| ಹರೀಶ್ ಶೆಟ್ಟಿ, ಮುಖ್ಯ ಆಡಳಿತ ಅಧಿಕಾರಿಯಾದ ಡಾ| ರೋಹನ್ ಮೋನಿಸ್ ಮತ್ತು ಕಣಚೂರು
ಆರೋಗ್ಯ ವಿಜ್ಞಾನ ಸಂಸ್ಥೆ ಸಮಿತಿಯ ಅಧ್ಯಕ್ಷರಾದ ಪ್ರೋ| ಡಾ| ಮೊಹಮ್ಮದ್ ಇಸ್ಮಾಯಿಲ್ ಹಾಗೂ ಸದಸ್ಯರಾದ ಪ್ರೋ ಡಾ|
ಎಂ.ವಿ. ಪ್ರಭು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು.
ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಸ್ಪರ್ಧಾ ಕೂಟದ ಸಂಘಟಕರಾದ ಹಾಗೂ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ|
ಡಾ|| ದೇವದಾಸ್ ರೈ 98450 81145, ಇವರನ್ನು ಸಂಪರ್ಕಿಸಬಹುದು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles