21.6 C
Karnataka
Thursday, November 14, 2024

ಕಾರ್ಕಳದ ಜವುಳಿ ಪಾರ್ಕ್‌ ಅಭಿವೃದ್ಧಿಗೆ ಸಿಎಂ ಗ್ರೀನ್ ಸಿಗ್ನಲ್: ಮಂಜುನಾಥ್ ಭಂಡಾರಿ ಹರ್ಷ

ಬೆಂಗಳೂರು: ಉಡುಪಿ ಜಿಲ್ಲೆಯ ಕಾರ್ಕಳದ ಜವುಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 27.97 ಕೋಟಿ ರೂ. ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲುಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿರುವುದಕ್ಕೆ ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹರ್ಷ ವ್ಯಕ್ತಪಡಿಸಿದ್ದಾರೆ.


ಹಲವು ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿದ್ದು ಸಿಎ೦ ಸಿದ್ದರಾಮಯ್ಯ ಅವರು ಮುತುವರ್ಜಿ ವಹಿಸಿ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ಕ್ಷ ಮಂಜುನಾಥ್ ಭಂಡಾರಿ ಕೃತಜ್ಞತೆ ಸಲ್ಲಿಸಿದ್ದಾರೆ.
ಸಂದರ್ಭದಲ್ಲಿ ಜೈವಿಕ ತಂತ್ರಜ್ಞಾನದ ಉದಯೋನ್ಮುಖ ಕ್ಷೇತ್ರಗಳಿಗೆ ಆದ್ಯತೆ ನೀಡುವ ‘ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ – 2024’ಕ್ಕೆ ಒಪ್ಪಿಗೆ ದೊರೆತಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳಿಗೆ ಹೆಚ್ಚಿಸಲು, ಒಂದು ಬಾರಿಯ ಕ್ರಮವಾಗಿ ಒಂದು ವರ್ಷದ ಅವಧಿಗೆ ಸಡಿಲಿಸಲು ನಿರ್ಧಾರ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೊರಾರ್ಜಿ ಶಾಲೆ- ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು 718.54 ಕೋಟಿ ವೆಚ್ಚದಲ್ಲಿ ಒದಗಿಸಲು ಆಡಳಿತಾತ್ಮಕ ಅನುಮೋದನೆ ಕೂಡಾ ದೊರೆತಿದೆ ಎ೦ದವರು ತಿಳಿಸಿದ್ದಾರೆ..

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles