ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟ 2025 ಜ. 17 ರಿಂದ 23ರ ವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಸಂಜೆ 5 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ರೀಡಾ ಜ್ಯೋತಿ ಪ್ರಜ್ವಲಿಸಿ, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್ ಕ್ರೀಡಾ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ವಿಧಾನ ಪರಿಷತ್ ಶಾಸಕ ಹಾಗೂ ಮುಖ್ಯಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್ ಅವರ ಉಪಸ್ಥಿತಿಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರಿನಲ್ಲಿ ಕ್ರೀಡೆಗಳಾದ ಬ್ಯಾಡ್ಮಿಂಟನ್, ಬಾಸ್ಕೆಟ್‍ಬಾಲ್, ಫೆನ್ಸಿಂಗ್ (ಕತ್ತಿವರಸೆ) ಫುಟ್ಬಾಲ್, ಹ್ಯಾಂಡ್‍ಬಾಲ್, ಖೋಖೋ, ನೆಟ್ಬಾಲ್, ಈಜು, ಟೇಕ್ವೊಂಡೋ, ವಾಲಿಬಾಲ್, ವೇಯ್ಟ್ ಲಿಫ್ಟಿಂಗ್, ವುಶು ಕ್ರೀಡಾಕೂಟ ಆಯೋಜಿಸಲಾಗಿದೆ.
ಆರ್ಚರಿ(ಬಿಲ್ಲುಗಾರಿಕೆ), ಅಥ್ಲೆಟಿಕ್ಸ್ , ಬಾಕ್ಸಿಂಗ್, ಸೈಕ್ಲಿಂಗ್ï ಜುಡೋ, ಕಬಡ್ಡಿ, ಕುಸ್ತಿ, ಕಯಾಕಿಂಗ್ ಮತ್ತು ಕನೋಯಿಂಗ್ ಕ್ರೀಡೆಗಳನ್ನು ಉಡುಪಿ ಜಿಲ್ಲೆಯಲ್ಲಿ ಆಯೋಜನೆಗೊಂಡಿದ್ದು ಹಾಕಿ, ಲಾನ್ ಟೆನ್ನಿಸ್, ಟೇಬಲ್ ಟೆನ್ನಿಸ್ ಕ್ರೀಡೆಗಳನ್ನು ಮಣಿಪಾಲದಲ್ಲಿ ಆಯೋಜಿಸಲಾಗಿದೆ.
ಕ್ರೀಡಾಕೂಟದ ಸಮಾರೋಪ ಸಮಾರಂಭ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 23 ರಂದು ಸಂಜೆ 4:30 ಗಂಟೆಗೆ ನಡೆಯಲಿದೆ