20.3 C
Karnataka
Thursday, November 14, 2024

ಇಪ್ಪತ್ತೈದು ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಡಾ ಆಯುಕ್ತ,ಬ್ರೋಕರ್

ಮಂಗಳೂರು:ಟಿ.ಡಿ.ಆರ್ ನೀಡಲು 25,00,000 ರೂ. (ಇಪ್ಪತ್ತೈದು ಲಕ್ಷ) ಲಂಚ ಬೇಡಿಕೆ ಇಟ್ಟಿದ್ದ ಮುಡಾ ಆಯುಕ್ತ ಮನ್ಸೂರ್ ಆಲಿ ಹಾಗೂ ಅವರ ಪರವಾಗಿ ಲಂಚದ ಹಣ ಸ್ವೀಕರಿಸುತ್ತಿದ್ದ ಬ್ರೋಕರ್ ಮಹಮ್ಮದ್ ಸಲಿಂ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಬ೦ಧಿಸಿದ್ದಾರೆ.

ಮಹಮ್ಮದ್ ಸಲಿಂ

ದೂರುದಾರರು ಮಂಗಳೂರು ತಾಲೂಕು ಕುಡುಪು ಗ್ರಾಮದಲ್ಲಿ ಒಟ್ಟು 10.8 ಎಕ್ರೆ ಜಮೀನನ್ನು ಖರೀದಿಸಿದ್ದು, ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಪಚ್ಚನಾಡಿ ಮತ್ತು ಕುಡುಪು ಗ್ರಾಮಗಳ ಸುತ್ತಮುತ್ತ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ

ಮಹಮ್ಮದ್ ಸಲಿಂ

ನಿರ್ವಹಣೆಯ ಘಟಕವನ್ನು ಭವಿಷ್ಯದಲ್ಲಿ ವಿಸ್ತರಿಸುವ ಬಗ್ಗೆ ಅವಶ್ಯವಾಗಿರುವ ಜಮೀನನ್ನು ಟಿ.ಡಿ.ಆರ್ ನಿಯಮದಡಿ ಖರೀದಿ ಮಾಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯೊಂದಿಗೆ ದೂರುದಾರ ರಿಗೆ ಹಾಗೂ ಜಮೀನಿನ ಈ ಹಿಂದಿನ ಮಾಲಕರಿಗೆ ಪತ್ರ ವ್ಯವಹಾರವಾಗಿರುತ್ತದೆ. ಅದರಂತೆ ಸದ್ರಿ ಜಮೀನು 2024 ಜನವರಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಹೆಸರಿಗೆ ನೊಂದಣಿಯಾಗಿರುತ್ತದೆ. ಬಳಿಕ ಮಹಾನಗರ ಪಾಲಿಕೆಯ ಆಯುಕ್ತರು ಟಿ.ಡಿ.ಆರ್ ನೀಡಲು ಮುಡಾ ಆಯುಕ್ತರಿಗೆ ಫೆಬ್ರವರಿ ತಿಂಗಳಲ್ಲಿ ಕಳುಹಿಸಿದ್ದು, ಮುಡಾ ಆಯುಕ್ತ ಮನ್ಸೂರ್ ಆಲಿರವರು ಸದ್ರಿ ಫೈಲ್ ಅನ್ನು ಪೆಂಡಿಂಗ್ ಇಟ್ಟಿರುತ್ತಾರೆ. ಈ ಬಗ್ಗೆ ದೂರುದಾರರು ಮುಡಾ ಆಯುಕ್ತ ಮನ್ಸೂರ್ ಆಲಿರವರ ಬಳಿ ಹೋಗಿ ಮಾತನಾಡಿದಾಗ 25 ಲಕ್ಷ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.
ಶನಿವಾರ ಮುಡಾ ಆಯುಕ್ತ ಮನ್ಸೂರ್ ಆಲಿರವರ ನಿರ್ದೇಶನದಂತೆ ಬ್ರೋಕರ್ ಮಹಮ್ಮದ್ ಸಲಿಂ ದೂರುದಾರರಿಂದ ಇಪ್ಪತ್ತೈದು ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. 25 ಲಕ್ಷ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಮೂಡಾ ಆಯುಕ್ತ ಮನ್ಸೂರ್ ಅಲಿರವರನ್ನು ಮತ್ತು ಲಂಚದ ಹಣವನ್ನು ಸ್ವೀಕರಿಸಿದ ಬ್ರೋಕರ್ ಮಹಮ್ಮದ್ ಸಲಿಂ ಅವರನ್ನು ದಸ್ತಗಿರಿ ಮಾಡಲಾಗಿರುತ್ತದೆ.
ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ, ಮಂಗಳೂರು ಪ್ರಭಾರ ಪೊಲೀಸ್ ಅಧೀಕ್ಷಕ ಚಲುವರಾಜು.ಬಿ, ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾ‌ರ್.ಪಿ ಅವರು ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles