ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಕಾಯ೯ಕ್ರಮ ನವೆಂಬರ್ 1 ರಂದು ನಗರದ ನೆಹರು ಮೈದಾನದಲ್ಲಿ ನಡೆಯಲಿದೆ.ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಬಳಿಕ ಪೆರೇಡ್ ಪಥಸಂಚಲನ, ಜಿಲ್ಲಾ ಪ್ರಶಸ್ತಿ ವಿತರಣೆ ಹಾಗೂ ವಿದ್ಯಾಥಿ೯ಗಳ ಸಾಂಸ್ಕೃತಿಕ ಕಾಯ೯ಕ್ರಮ ನಡೆಯಲಿದೆ.
ಹಲ್ಮಿಡಿ ಶಾಸನ ಅನಾವರಣ ಕಾರ್ಯಕ್ರಮ ಪೂರ್ವದಲ್ಲಿ ಪುರಭವನ ಮುಂಭಾಗದ ರಾಜಾಜಿ ಪಾಕ್೯ ಆವರಣದಲ್ಲಿ ಬೆಳಿಗ್ಗೆ 8:30 ಕ್ಕೆ ಕನ್ನಡದ ಮೊದಲ ಶಾಸನವಾದ ಹಲ್ಮಡಿ ಶಾಸನದ ಪ್ರತಿಕೃತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿ ಸಿಬ್ಬಂದಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸುವರು. ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.