26.3 C
Karnataka
Saturday, November 23, 2024

ರಾಜ್ಯದ ಆರ್ಥಿಕತೆಗೆ ಚೈತನ್ಯ: ಹರೀಶ್ ಕುಮಾರ್

ಮ೦ಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರಆರ್ಥಿಕತೆಗೆ ಚೈತನ್ಯ ನೀಡಿದ್ದು, ಸಿದ್ಧರಾಮಯ್ಯ ಅವರು ಮಂಡಿಸಿದ ಈ ವರ್ಷದ ಬಜೆಟ್ ರಾಜ್ಯವನ್ನು ಹೊಸ ದಿಕ್ಕಿನತ್ತ ಕೊಂಡೊಯ್ಯಲಿದೆ. ಅದರಲ್ಲೂ ಕರಾವಳಿ ಜಿಲ್ಲೆಯ ಪ್ರಮುಖವಾಗಿರುವ ಮೀನುಗಾರಿಕಾ ಕ್ಷೇತ್ರಕ್ಕೆ 3ಸಾವಿರ ಕೋಟಿ ರೂ. ಮೊತ್ತದ ಯೋಜನೆ, ಸಮುದ್ರ ಅಂಬುಲೆನ್ಸ್, ಪುತ್ತೂರಿನಲ್ಲಿ ಪಶು ವೈದ್ಯಕೀಯ ಕಾಲೇಜು ನಿಜಕ್ಕೂ ಒಳ್ಳೆಯ ಯೋಜನೆಗಳು. ಈ ಮೂಲಕ ಸಿದ್ಧರಾಮಯ್ಯ ಅವರು ಆರ್ಥಿಕ ವಲಯದ ಮಾಸ್ಟರ್ಮೈಂಡ್ ಎನ್ನುವುದನ್ನು ಮತ್ತೆ ಸಾಬೀತು ಮಾಡಿದ್ದಾರೆ ಎ೦ದು ವಿಧಾನ ಪರಿಷತ್ ಸದಸ್ಯರು ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ರಾಜ್ಯ ಸರಕಾರದ ಬಜೆಟ್ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕೃಷಿ, ಮೀನುಗಾರಿಕೆ, ಉದ್ಯಮ, ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳಿಗೆ ಪ್ರೋತ್ಸಾಹ ನೀಡಲಾಗಿದೆ. ರೈತ ಮಹಿಳೆಯರಿಗೆ ಹಸು-ಎಮ್ಮೆ ಖರೀದಿಗೆ ಸಾಲ ಸೌಲಭ್ಯ, ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರ ಮೊತ್ತ ಹೆಚ್ಚಳ, ಕರಾವಳಿಯಲ್ಲಿ ಬಲಿಷ್ಠವಾಗಿರುವ ಸ್ವಸಹಾಯ
ಗುಂಪುಗಳಿಗೆ 10 ಕೋಟಿ ರೂ. ಮೀಸಲು, ಹಜ್ ಭವನ, ಗ್ರಾಮ ಪಂಚಾಯಿತಿಗಳಲ್ಲಿ ಇ- ಆಫೀಸ್ ಆರಂಭ, ಅಂಗನವಾಡಿ ಕಾರ್ಯಕರ್ತರಿಗೆ ಉಚಿತ ಸ್ಮಾರ್ಟ್ ಫೋನ್, ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ, ಅಡಕೆ ರೋಗ ನಿಯಂತ್ರಣಕ್ಕೆ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಉತ್ತೇಜನ ನೀಡಲಾಗಿದೆ, ಕರಾವಳಿಯ ಹಿರಿಯ ಪತ್ರಕರ್ತ ರಘುರಾಮ ವಡ್ಡರ್ಸೆ ಹೆಸರಲ್ಲಿ ಪ್ರಶಸ್ತಿ, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಆರಂಭಿಸಿರುವುದು ಒಳ್ಳೆಯ ಯೋಜನೆ ಎ೦ದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles