24.5 C
Karnataka
Thursday, April 30, 2026

ಅಕ್ಟೋಬರ್ 15 ರಿಂದ ಖಾದಿ ಉತ್ಸವ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಹಾಗೂ ಮಾರಾಟ ಖಾದಿ ಉತ್ಸವ-2025 ಅಕ್ಟೋಬರ್ 15 ರಿಂದ 24 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 9 ರವರೆಗೆ ನಗರದ ಲಾಲ್‍ಭಾಗ್ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಇಲಾಖೆ ಸಚಿವ ಶರಣಬಸಪ್ಪ ದರ್ಶನಾಪೂರ ಖಾದಿ ಮಳಿಗೆ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತುರುವಿಹಾಳ ಗ್ರಾಮೋದ್ಯೋಗ ಮಳಿಗೆ ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಅರಳೆಖಾವಿ, ರೇಷ್ಮೆಖಾದಿ, ಉಣ್ಣೆ ಬಟ್ಟೆಗಳು, ಖಾದಿ ಪಾಲಿವಸ್ತ್ರ, ಬಟ್ಟೆಗಳು ಹಾಗೂ ಖಾದಿಯ ವೈವಿಧ್ಯಮಯ ಉತ್ಪನ್ನಗಳು, ಯುವ ಪೀಳಿಗೆಯ ಮನ ಮೆಚ್ಚುವ ಮೋಹಕ ಬಾರಿ ಡಿಸೈನರ್ ಉಡುಪುಗಳು, ಶರ್ಟ್‍ಗಳು, ಕುರ್ತಾಗಳು ಮತ್ತು ಆಕರ್ಷಣೆಯ ಉಡುಪುಗಳು,
ಗ್ರಾಮೀಣ ಗುಡಿಗಾರರಿಂದ ತಯಾರಿಸಿದ ಮರದ ಕೆತ್ತನೆಯ ವಸ್ತುಗಳು ಮತ್ತು ಆಕರ್ಷಕ ಆಟಿಕೆಗಳು, ಆಕರ್ಷಕ ಹಾಗೂ ನೈಸರ್ಗಿಕ ಸೆಣಬಿನ ಉತ್ಪನ್ನಗಳು, ಗ್ರಾಮೀಣ ಚರ್ಮೋದ್ಯೋಗ ಉದ್ದಿಮೆಯಲ್ಲಿ ತಯಾರಾದ ಆಕರ್ಷಕ ಪಾದರಕ್ಷೆಗಳು, ಬೆಲ್ಟ್, ಗ್ರಾಮೀಣ ಕುಂಬಾರಿಕೆಯ ಕುಶಲ ವಸ್ತುಗಳು, ವ್ಯಾನಿಟಿ ಬ್ಯಾಗ್, ಪರ್ಸ್‍ಗಳು, ಹಪ್ಪಳ, ಉಪ್ಪಿನಕಾಯಿ, ಉತ್ತರ ಕರ್ನಾಟಕ ತಿಂಡಿ ತಿನಿಸುಗಳು ಲಭ್ಯವಿರುತ್ತದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles