26.2 C
Karnataka
Monday, June 1, 2026

ಕೆ.ಎಸ್.ಆರ್.ಟಿ.ಸಿ ವಿದ್ಯಾರ್ಥಿ ಬಸ್ ಪಾಸ್: ಅರ್ಜಿ ಆಹ್ವಾನ

ಮಂಗಳೂರು: 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಕೆ.ಎಸ್.ಆರ್.ಟಿ.ಸಿ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನÀಲ್ಲಿ ಅರ್ಜಿ ಸಲ್ಲಿಸಬಹುದು. ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ. 30 ಸೇವಾ ಶುಲ್ಕವನ್ನು ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ಸುಪಾಸುಗಾಗಿ ಅರ್ಜಿ ಸಲ್ಲಿಸಲು ಡಿಕ್ಲೇರೇಶನ್ ಫಾರ್ಮ್ (ಆeಛಿಟಚಿಡಿಚಿಣioಟಿ ಈoಡಿm) ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕೆ.ಎಸ್.ಆರ್.ಟಿ.ಸಿ ನಿಗಮದ ವೆಬ್‍ಸೈಟ್ https://ksrtc.karnataka.gov.in/studentpass ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. ಹಾಗೂ ಡಿಕ್ಲೇರೇಶನ್ ಫಾರ್ಮ್ ಭರ್ತಿಮಾಡಿ ಶಾಲಾ/ಕಾಲೇಜು ಮುಖೋಪಾಧ್ಯಾಯರ/ ಪ್ರಾಂಶುಪಾಲರ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ ಅಪ್‍ಲೋಡ್ ಮಾಡಬೇಕು.
ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‍ನ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಬಸ್ಸು ಪಾಸುಗಳನ್ನು ಜೂನ್ 1 ರಿಂದ ನಿಗದಿತ ಕೌಂಟರ್‍ಗಳಲ್ಲಿ ವಿತರಿಸಲಾಗುತ್ತದೆ. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‍ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದು. ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸು ಪಡೆಯುವ ಅಗತ್ಯವಿದೆ. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದು.
ಕೆ.ಎಸ್.ಆರ್.ಟಿ.ಸಿ ನಿಗಮ ವ್ಯಾಪ್ತಿಯ ಪಾಸ್ ವಿತರಣಾ ಕೌಂಟರ್‍ಗಳ ವಿವರಗಳನ್ನು ನಿಗಮದ ವೆಬ್‍ಸೈಟ್ https://ksrtc.karnataka.gov.in/studentpass ನಲ್ಲಿ ಒದಗಿಸಲಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles