27.2 C
Karnataka
Friday, May 1, 2026

ಸೆ.30 ರಂದು ‘ಕುಡ್ಲದ ಪಿಲಿ ಪರ್ಬ

ಮ೦ಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು.

ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿ ಯವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ ಪಿಲಿಪರ್ಬವು ಸಂಭ್ರಮದಿಂದ ನಡೆಯಲಿದೆ. ನಮ್ಮ ಪ್ರತಿಷ್ಠಾನದ ಮೂಲ ಉದ್ದೇಶ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ರೀತಿಯ ಅನುಮತಿ ಪಡೆಯಲಾಗಿದ್ದು ಸಾರ್ವಜನಿಕರೆಲ್ಲರಿಗೂ ಸಂಭ್ರಮದ ಪಿಲಿಪರ್ಬಕ್ಕೆ ಸ್ವಾಗತ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ದಿವಾಕರ್ ಪಾಂಡೇಶ್ವರ ಪ್ರಮುಖರಾದ ನರೇಶ್ ಶೆಣೈ, ಅಶ್ವಿತ್ ಕೊಟ್ಟಾರಿ, ಲಲಿತ್ ಮೆಂಡನ್, ಕಿರಣ್ ಶೆಣೈ, ಜಗದೀಶ್ ಕದ್ರಿ, ಸಂಜಯ್ ಪೈ, ಸಹಾನ್ ಕೋಡಿಕೆರೆ, ಸತೀಶ್ ಮುಂಡಕಾಜೆ, ನರೇಶ್ ಪ್ರಭು, ಚೇತನ್ ಕಾಮತ್, ಅನಿಲ್ ಬೋಳೂರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles