28.8 C
Karnataka
Sunday, May 19, 2024

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024ಗೆ ಚಾಲನೆ

ಮಂಗಳೂರು: ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು. ಈನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರಯೋಧ ದಿ.ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಗೌರವಾರ್ಥ ಮಂಗಳೂರುಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಮೂರು ದಿನಗಳಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024ಕ್ರಿಕೆಟ್‌ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಬ್ರ್ಯಾಂಡ್‌ ಮಂಗಳೂರು ಸ್ಲೋಗನ್‌ ಮೂಲಕ ಇಲ್ಲಿನ ಪತ್ರಕರ್ತರು ಕರಾವಳಿಯರಾಯಭಾರಿಗಳಾಗಿದ್ದಾರೆ. ಪತ್ರಕರ್ತರ ಸಂಘಗಳ ಅನ್ಯೋನ್ಯ ಚಟುವಟಿಕೆಗಳಿಗೆ ಎಲ್ಲರಿಗೂಮಾದರಿಯಾಗಿದ್ದು, ಇದು ಸಾಮಾಜಿಕ ಹಿತಾಸಕ್ತಿಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದುಅವರು ಶ್ಲಾಘಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರ ದೀಪ ಪ್ರಜ್ವಲನಗೊಳಿಸಿಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಟ್ರೋಫಿ ಅನಾವರಣಗೊಳಿಸಿದರು. ಮಂಗಳೂರು ದಕ್ಷಿಣ ಶಾಸಕವೇದವ್ಯಾಸ್‌ ಕಾಮತ್‌ ಅವರು ಪ್ರದರ್ಶನ ಪಂದ್ಯ ಉದ್ಘಾಟಿಸಿದರು. ವಿಧಾನ ಪರಿಷತ್‌ಸದಸ್ಯ ಮಂಜುನಾಥ ಭಂಡಾರಿ ಅವರು ಬ್ರ್ಯಾಂಡ್‌ ಮಂಗಳೂರು ಫಲಕ ಅನಾವರಣಗೊಳಿಸಿದರು.ರೋಹನ್‌ ಕಾರ್ಪೊರೇಷನ್‌ ಆಡಳಿತ ನಿರ್ದೇಶಕ ರೋಹನ್‌ ಮೊಂತೆರೋ ಅವರು ಕ್ರೀಡಾ ಸಂಚಿಕೆ
ಅನಾವರಣಗೊಳಿಸಿದರು. ಮೆರವಣಿಗೆಗೆ ಮಾಜಿ ಸಚಿವ ಅಭಯಚಂದ್ರ ಜೈನ್‌ ಚಾಲನೆ ನೀಡಿದರು.ಎಂಆರ್‌ಜಿ ಗ್ರೂಪ್‌ ಚೇರ್‌ಮೆನ್‌ ಪ್ರಕಾಶ್‌ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮಉದ್ಘಾಟಿಸಿದರು. ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅವರು ಕಾರ್ಟೂನ್‌ ಪ್ರದರ್ಶನಉದ್ಘಾಟಿಸಿದರು. ಮಂಗಳೂರಿನ ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿಅವರು ಪಥ ಸಂಚಲನಕ್ಕೆ ಚಾಲನೆ ನೀಡಿದರು. ಐಎಫ್‌ಡಬ್ಲ್ಯೂಜೆ ಪ್ರಧಾನ ಕಾರ್ಯದರ್ಶಿಮದನ್‌ ಗೌಡ ಅವರು ಕ್ಯಾಪ್‌ ಹಸ್ತಾಂತರಿಸಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರುಅಧ್ಯಕ್ಷತೆ ವಹಿಸಿದ್ದರು.

ಕೆಐಒಸಿಎಲ್‌ ಅಧ್ಯಕ್ಷ ಸಾಮಿನಾಥನ್‌, ದ.ಕ. ಬಸ್‌ ಮಾಲೀಕರ ಸಂಘದ ಮಾಜಿ ಅಧ್ಯಕ್ಷದಿಲ್‌ರಾಜ್‌ ಆಳ್ವ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ ಸಿ ಲೋಕೇಶ, ರಾಜ್ಯ ಕಾರ್ಯಸಮಿತಿ ಸದಸ್ಯರಾದ ಬಾಳ ಜಗನ್ನಾಥ ಶೆಟ್ಟಿ, ಇಬ್ರಾಹಿಂ ಅಡ್ಕಸ್ಥಳ, ಪತ್ರಿಕಾ ಭವನಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್‌., ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌,ಕ್ರೀಡಾಕೂಟ ಸಂಚಾಲಕ ಅನ್ನು ಮಂಗಳೂರು ಇದ್ದರು.ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಪತ್ರಕರ್ತರ ಸಂಘದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ. ಬಿ. ಹರೀಶ್ ರೈನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles