26.8 C
Karnataka
Sunday, November 17, 2024

ಬಹುಸಂಸ್ಕೃತಿ ಉತ್ಸವ ಲಾಂಛನ ಬಿಡುಗಡೆ

ಮಂಗಳೂರು: ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯುವ ಬಹುಸಂಸ್ಕೃತಿ ಉತ್ಸವದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.

ಡಿ.3 ಮತ್ತು 4ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದ್ದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಅಕಾಡೆಮಿ, ಕೊಂಕಣಿ ಅಕಾಡೆಮಿ, ಅರೆಭಾಷೆ ಅಕಾಡೆಮಿ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಬಹುಸಂಸ್ಕೃತಿಉತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಅರೆಭಾಷೆಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles