17 C
Karnataka
Wednesday, November 20, 2024

ಗ್ರಂಥಾಲಯ ವಿಜ್ಞಾನ ತರಬೇತಿ: ಅರ್ಜಿ ಆಹ್ವಾನ

ಮಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು, ಬೆಂಗಳೂರು, ಧಾರವಾಡ, ಕಲುಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಜೂನ್ 19 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

 ಪಿಯುಸಿ ಪರೀಕ್ಷೆಯಲ್ಲಿ ಶೇಕಡ 40%ರಷ್ಟು, ಎಸ್.ಸಿ/ಎಸ್.ಟಿ ಶೇಕಡ 35% ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

  ಹಾಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ‘ಡಿ’ ದರ್ಜೆಯ ಗ್ರಂಥಾಲಯ ಸಹವರ್ತಿಗಳು, ಸಂಬಂಧಪಟ್ಟ ಉಪ ನಿರ್ದೇಶಕರು, ಮುಖ್ಯ ಗ್ರಂಥಾಲಯ ಅಧಿಕಾರಿಗಳ ಮುಖಾಂತರ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಪದಾಧಿಕಾರಿಗಳ ಮುಖಾಂತರ ಹಾಗೂ ಇತರೆ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮುಖಾಂತರ ಅರ್ಜಿ ಸಲ್ಲಿಸಬೇಕು. 

ಅರ್ಜಿಯ ಜೊತೆಗೆ ಪಿಯುಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸೇವೆಗೆ ಸೇರಿದ ದಿನಾಂಕ, ವೇತನ ಪ್ರಮಾಣ ಪತ್ರ, ನಡವಳಿಕೆ ಪ್ರಮಾಣ ಪತ್ರದ ನಕಲು ಪ್ರತಿಯನ್ನು ಲಗತಿಸಬೇಕು. ಸಾಮಾನ್ಯ ಅಭ್ಯರ್ಥಿಗಳು ಪಿಯುಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಕನ್ನಡ ಮಾಧ್ಯಮ, ಗ್ರಾಮೀಣ, ಮಹಿಳೆ ಹಾಗೂ ಮಾಜಿ ಸೈನಿಕರು 371 ಎ ಪ್ರಮಾಣ ಪತ್ರಗಳ ದೃಢೀಕೃತ ನಕಲು ಪ್ರತಿಯನ್ನು ಲಗತಿಸಬೇಕು. ಹೆಚ್ಚಿನ ಮಾಹಿತಿಗೆ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ, ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರ ಕಚೇರಿ, ದೂರವಾಣಿ ಸಂಖ್ಯೆ: 0824-2425873, ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ, ರಾಜ್ಯ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೆÉೀರಿ, ದೂರವಾಣಿ ಸಂಖ್ಯೆ: 080-22212128, ಧಾರವಾಡದ ಡಿಸಿ ಕಚೇರಿ ಆವರಣದಲ್ಲಿರುವ ನಗರ ಕೇಂದ್ರ ಗ್ರಂಥಾಲಯ, ಉಪ ನಿರ್ದೇಶಕರ ಕಚೆÉೀರಿ ದೂರವಾಣಿ ಸಂಖ್ಯೆ: 0836-2442465 ಸಂಪರ್ಕಿಸುವಂತೆ ಮಂಗಳೂರು ನಗರ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles