ಮಂಗಳೂರು: ವೃತ್ತಿಯ ಜೊತೆ ಸಮಾಜಮುಖಿ ಪ್ರವೃತ್ತಿ ಬೆಳೆಸಿಕೊಂಡರೆ ನಿವೃತ್ತಿ ಜೀವನಮೌಲ್ಯಯುತವಾಗಿರುತ್ತದೆ, ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.
ಬಿ. ಎ. ಕುಮಾರ ಹೆಗ್ಡೆ ಹೇಳಿದ್ದಾರೆ.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಸ್ಯಶಾಸ್ತ್ರ ಅಧ್ಯಾಪಕರ ಸಂಘವನಶ್ರೀ ಹಾಗೂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಸನ್ಮಾನ
ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವೃತ್ತಿ ಮತ್ತು ಸಮಾಜಮುಖಿ ಪ್ರವೃತ್ತಿಗಳೆರಡೂಪರಸ್ಪರ ಪೂರಕವಾಗಿದ್ದರೆ ಜೀವನದಲ್ಲಿ ಸಾರ್ಥಕತೆ ಪಡೆಯಲು ಸಾಧ್ಯಮ ಎಂದರು.
ಯೆನಪೋಯಾ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ ಪ್ರೊ. ಕೆ.ಆರ್. ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ
ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ್ ಭಂಡಾರಿ, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ಪ್ರಸನ್ನ ಕೆ.ಕೆ. ಉಪಸ್ಥಿತರಿದ್ದರು.
ವಿಶ್ವವಿದ್ಯಾನಿಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಶೋಭಾ, ಸಹಾಯಕ ಪ್ರಾಧ್ಯಾಪಕ ಡಾ.ಸಿದ್ಧರಾಜು ಎಂ. ಎನ್. ವನಶ್ರೀ, ಸಂಘದ ಕಾರ್ಯದರ್ಶಿ ಡಾ. ವಿನಾಯಕ ಕೆ. ಎಸ್. ಸೇರಿದಂತೆ ಇತರ
ಸದಸ್ಯರು ಉಪಸ್ಥಿತರಿದ್ದರು.
