ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 1ರವರೆಗೆ ಜಿಲ್ಲೆಯಲ್ಲಿ 41,90,665 ರೂಪಾಯಿ ಮೌಲ್ಯದ 12,844 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ.ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ ಒಟ್ಟು 243 ಎಫ್ ಐ ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.