16.7 C
Karnataka
Saturday, November 23, 2024

ಮಾರ್ಚ್ 9ರಂದು ರಾಷ್ಟ್ರೀಯ ಲೋಕ್ ಅದಾಲತ್

ಮಂಗಳೂರು: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 9 ರಂದು ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರದಲ್ಲಿ ಲೋಕ್ ಅದಾಲತ್ ನ ಮೂಲಕ ಇತ್ಯರ್ಥ ಮಾಡಿಸಿಕೊಳ್ಳ ಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ದೂರವಾಣಿ ಸಂಖ್ಯೆ: 0824-2448111 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles