ಮಂಗಳೂರು: ಏ.26ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿಯ ಕಾಯಿದೆ ಕಲಂ 135 (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3 (ಎ) ಅನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ, ಸಂವಿಧಾನಾತ್ಮಕ ಹಕ್ಕಾದ ಮತ ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳ ಮಾಲೀಕರು ಹಾಗೂ ನಿಯೋಜಿಕರು ಅನುವು ಮಾಡಿಕೊಡಬೇಕಿದೆ.
ಆದಕಾರಣ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಈ ದಿನದಂದು ಅರ್ಹ ಮತದಾರರಾಗಿರುವ ಎಲ್ಲಾ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ ವೇತನ ಸಹಿತ ರಜೆ ನೀಡಬೇಕು. ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಕ್ಷಿಣ ಕನ್ನಡ ಉಪ ವಿಭಾಗದ 1ಮತ್ತು 2 ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.