ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28ರಂದು ಬೆಳಿಗ್ಗೆ 11ಗಂಟೆಯಿಂದ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ನಡೆಯಲಿದೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿಯೂ ಸಾರ್ವಜನಿಕರು ಅಹವಾಲು/ದೂರುಗಳನ್ನು ನೀಡಬಹುದು ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು.
ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ 0824 2950997, 9364062517, ಪೊಲೀಸ್ ಉಪಾಧೀಕ್ಷಕರ ಕಚೇರಿ : ದೂರವಾಣಿ ಸಂಖ್ಯೆ 0824 – 2453420, 0824– 2453420, ಪೊಲೀಸ್ ನಿರೀಕ್ಷಕರು-1ಕಚೇರಿ – ದೂರವಾಣಿ ಸಂಖ್ಯೆ 0824 – 2427237, 9364062691, ಪೊಲೀಸ್ ನಿರೀಕ್ಷಕರು-2 ಕಚೇರಿ – ದೂರವಾಣಿ ಸಂಖ್ಯೆ 0824 – 2427237, 9364062692, ಪೊಲೀಸ್ ನಿರೀಕ್ಷಕರು-3 ಕಚೇರಿ ದೂರವಾಣಿ ಸಂಖ್ಯೆ 0824 – 2427237, 9364062693 ಸಂಪರ್ಕಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ