20.7 C
Karnataka
Thursday, January 9, 2025

ಲಂಚದ ಹಣ ಸ್ವೀಕರಿಸುತ್ತಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ಮ೦ಗಳೂರು: ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು 4 ಲಕ್ಷ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಹಣವನ್ನು ಸ್ವೀಕರಿಸುತ್ತಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಜಿ.ಎಸ್ . ದಿನೇಶ್ ನನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ.

ವ್ಯಕಿಯೋವ೯ರ ಅಜ್ಜಿ ಮೃತಪಟ್ಟ ಕಾರಣ ಅವರ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡುವ ಸಲುವಾಗಿ ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ ರವರ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಸದರಿ ಅರ್ಜಿಯು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ ಕಳುಹಿಸಲಾಗಿತ್ತು. ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಯಾವುದೇ ಕ್ರಮ ಕೈಗೊಳ್ಳದೇ ಬಾಕಿ ಇರಿಸಿಕೊಂಡಿದ್ದ. ಅರ್ಜಿ ಸಲ್ಲಿಸಿದ್ದ ವ್ಯಕ್ತಿ ಈ ಬಗ್ಗೆ ದಿನಾಂಕ: 9-12-2024 ರಂದು ಅರ್ಜಿಯ ಬಗ್ಗೆ ಕಂದಾಯ ನಿರೀಕ್ಷಕರ ಕಚೇರಿಗೆ ಹೋಗಿ ವಿಚಾರಿಸಿದ್ದು ಮುಲ್ಕಿ ಕಂದಾಯ ನಿರೀಕ್ಷಕ ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರುಗಳ ಹೆಸರುಗಳನ್ನು ಸೇರ್ಪಡೆ ಮಾಡಲು 4 ಲಕ್ಷ ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ. ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಅವರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

19.12.2024 ರ ಬೆಳಿಗ್ಗೆ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಪಿರ್ಯಾದಿದಾರರಿಂದ. ರೂ. 4 ಲಕ್ಷ ಲಂಚದ ಹಣವನ್ನು ಸ್ವೀಕರಿಸುವಾಗ ಸುರತ್ಕಲ್ ಜಂಕ್ಷನ್ ಬಳಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದರಿ ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ಪೊಲೀಸ್ ಅಧೀಕ್ಷಕ ಎಂ.ಎ ನಟರಾಜ, ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಡಾ॥ ಗಾನ ಪಿ ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್ ಅವರು ಸಿಬ್ಬಂದಿಗಳ ಜೊತೆ ಟ್ರಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles