33 C
Karnataka
Tuesday, May 5, 2026

ಕ್ಷೇತ್ರ ಸಮೀಕ್ಷಾ ಯೋಜನೆ – ಲಸಿ ವೇವ್-2 ಆರಂಭ

ಮಂಗಳೂರು: ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವತಿಯಿಂದ ದೇಶದ ವಯೋವೃದ್ಧ ಜನಸಂಖ್ಯೆಯ ಸಮಗ್ರ ಅಧ್ಯಯನಕ್ಕಾಗಿ ಮಹತ್ವದ ಲಾಂಜಿಟ್ಯೂಡಿನಲ್ ಏಜಿಂಗ್ ಸ್ಟಡಿ ಇನ್ ಇಂಡಿಯಾ ವೇವ್-2 ( ಲಸಿ ವೇವ್ 2) ಯೋಜನೆ ಪ್ರಾರಂಭಿಸಲಾಗಿದೆ.
ಈಗಾಗಲೇ 2017-18ರಲ್ಲಿ ಯಶಸ್ವಿಯಾಗಿ ನಡೆಸಿದ ಲಸಿ ವೇವ್-1 ನಂತರ, ಎರಡನೇ ಹಂತದ ಈ ಸಮೀಕ್ಷೆ ದೇಶದ ವಯೋವೃದ್ಧರ ಆರೋಗ್ಯ, ಆರ್ಥಿಕ ಸ್ಥಿತಿ, ಸಾಮಾಜಿಕ ಪರಿಸ್ಥಿತಿ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ವಿಶ್ಲೇಷಣಾತ್ಮಕ ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶ ಹೊಂದಿದೆ.
ಈ ಸಮೀಕ್ಷೆಯನ್ನು ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಕಾರ್ಯಗತಗೊಳಿಸಲು ಸಿಗ್ಮಾ ರಿಸರ್ಚ್ & ಕಂಸಲ್ಟಿಂಗ್ ಪ್ರೈ.ಲಿ. (ಸಂಸ್ಥೆಯನ್ನು ಕ್ಷೇತ್ರ ಸಂಸ್ಥೆಯಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯದ 12 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಈ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತದೆ.
ಸಮೀಕ್ಷೆಯ ಯಶಸ್ವಿ ನಿರ್ವಹಣೆಗೆ ಭಾರತ ಸರ್ಕಾರವು ಸಂಬಂಧಿತ ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ವಿನಂತಿಸಲಾಗಿದೆ. ಈ ಅಧ್ಯಯನವು ಭವಿಷ್ಯದ ವಯೋವೃದ್ಧ ಕಲ್ಯಾಣ ನೀತಿಗಳನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles