18.5 C
Karnataka
Friday, November 22, 2024

ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ಮನೋಬಲ ವೃದ್ದಿಯಾಗುತ್ತದೆ: ಕರುಣಾಕರ ಶೆಟ್ಟಿ ಮದ್ಯಗುತ್ತು

ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಮುಂಬಯಿ ವಿ.ಕೆ ಸಮೂಹ ಸಂಸ್ಥೆಯ ಸಿ.ಎಂ.ಡಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ನುಡಿದರು.
ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು. ಮಾನವೀಯ ಮೌಲ್ಯಗಳಿಗೆ ಬೆಲೆ ನೀಡುತ್ತಾ ಬಂದಿರುವ ಪಟ್ಲ ಪೌಂಡೇಶನ್ ಎಲ್ಲೆಡೆ ಮನೆ ಮಾತಾಗಿದೆ ಇದು ದೇಶ ವಿದೇಶಗಳಲ್ಲಿ ಒಳ್ಳೆಯ ಹೆಸರನ್ನು ಪಡೆದಿದ್ದು ಒಂದು ಉತ್ತಮ ಸಂಘಟನೆಯಾಗಿದೆ. ಈ ಟ್ರಸ್ಟ್‌ ನ ಸಮಾಜಮುಖಿ ಸೇವೆ ನಿರಂತರವಾಗಿ ಮುಂದುವರಿಯಲಿ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಯಕ್ಷಧ್ರುವ ಪಟ್ಲ ಪೌಂಡೇಶನ್ ಸ್ಥಾಪಕ ಅಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಮಾತನಾಡಿ ದಾನಿಗಳ ನೆರವಿನಿಂದ ಪಟ್ಲ ಪೌಂಡೇಶನ್ ಇಷ್ಟರವರೆಗೆ ಅಶಕ್ತ ಕಲಾವಿದರಿಗೆ ಸಹಾಯ ಹಸ್ತ ಮನೆ ನಿರ್ಮಾಣ ಇಂತಹ ಸಮಾಜ ಮುಖಿ ಕೆಲಸಗಳಿಗೆ ಸುಮಾರು 10 ಕೋಟಿವರೆಗೆ ಸಹಾಯಧನ ನೀಡಿದ್ದು ಪ್ರಸಕ್ತ ಟ್ರಸ್ಟ್ ವತಿಯಿಂದ 80 ಶಾಲೆಗಳಲ್ಲಿ ಸುಮಾರು10000 ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ಶಿಕ್ಷಣ ತರಬೇತಿ ಯನ್ನು ನೀಡುತ್ತಿದ್ದೇವೆ ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕು ಎಂದರು.
ವೇದಿಕೆಯಲ್ಲಿ ಉದ್ಯಮಿ ಮಾಧವ ಶೆಟ್ಟಿ ಬಾಳ, ಶಾಲೆಯ ಮುಖ್ಯ ಶಿಕ್ಷಕಿ ಕುಸುಮಾ, ಯಕ್ಷಗಾನ ಶಿಕ್ಷಕಿ ಪೂರ್ಣಿಮ ಯತೀಶ್ ರೈ ,ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಕಾರ್ಯದರ್ಶಿ ಗಂಗಾಧರ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಲ ಪೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಿದ್ದರು. ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ಉಪಸ್ಥಿತರಿದ್ದರು. ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಷರಾಜ್ ಶೆಟ್ಟಿ ಸ್ವಾಗತಿಸಿ ಶಿಕ್ಷಕ ಹರೀಶ್ ಧನ್ಯವಾದ ಸಮರ್ಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles